ಹಾವೇರಿ: ಸಾಲಬಾಧೆ ತಾಳಲಾರದೆ ರೈತನೊಬ್ಬ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಹಾವೇರಿ ಸಮೀಪದ ದೇವಗಿರಿ ಗ್ರಾಮದಲ್ಲಿ ನಡೆದಿದೆ.
ಆತ್ಮಹತ್ಯೆಗೆ ಶರಣಾದ ರೈತನನ್ನು 36 ವರ್ಷದ ಮಲ್ಲಪ್ಪ ಸುಂಕದ ಎಂದು ಗುರುತಿಸಲಾಗಿದೆ. ನಾಲ್ಕು ಎಕರೆ ಜಮೀನು ಹೊಂದಿದ್ದ ಮಲ್ಲಪ್ಪ ಬ್ಯಾಂಕ್ ಮತ್ತು ಕೈಸಾಲ ಅಂತಾ ಐದು ಲಕ್ಷಕ್ಕೂ ಅಧಿಕ ಸಾಲ ಮಾಡಿದ್ದ ಎನ್ನಲಾಗಿದೆ.
ಅತಿವೃಷ್ಟಿಯಿಂದ ಹತ್ತಿ ಮತ್ತು ಮೆಕ್ಕೆಜೋಳ ಹಾಳಾಗಿದ್ದರಿಂದ ಬೇಸತ್ತು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಮನೆಯಲ್ಲಿ ಯಾರೂ ಇಲ್ಲದ ವೇಳೆ ಮಲ್ಲಪ್ಪ ಆತ್ಮಹತ್ಯೆಗೆ ಶರಣಾಗಿದ್ದಾನೆ ಎನ್ನಲಾಗಿದೆ. ಹಾವೇರಿ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.