ಸೋನಿಪತ್ (ಹರಿಯಾಣ): ದೆಹಲಿ-ಹರಿಯಾಣ ಗಡಿ ಭಾಗವಾದ ಸಿಂಘು ಗಡಿಯಲ್ಲಿ ಕೇಂದ್ರ ಸರ್ಕಾರದ ಕೃಷಿ ಕಾಯ್ದೆಗಳ ವಿರುದ್ಧ ಪ್ರತಿಭಟಿಸುತ್ತಿದ್ದ ರೈತ ಇಂದು ಮೃತಪಟ್ಟಿದ್ದಾರೆ.
ಮೃತ ರೈತನನ್ನು ಸೋನಿಪತ್ನ ಬರೋಡಾ ಗ್ರಾಮದ ಮುರ್ತಕ್ ಅಜಯ್ (32) ಎಂದು ಗುರುತಿಸಲಾಗಿದೆ. ಇವರು ಡಿಸೆಂಬರ್ 1 ರಿಂದ ಧರಣಿಯಲ್ಲಿ ಪಾಲ್ಗೊಂಡಿದ್ದರು.
ಓದಿ: ರೈತರ ಹೋರಾಟಕ್ಕೆ ಸಾಥ್ ಕೊಟ್ಟ ಸೈನಿಕ ಪೊಲೀಸ್ ವಶಕ್ಕೆ
ಸದ್ಯ ಪೊಲೀಸರು ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಸೋನಿಪತ್ ಜನರಲ್ ಆಸ್ಪತ್ರೆಗೆ ಕಳುಹಿಸಿದ್ದಾರೆ. ಹೆಚ್ಚಿನ ಮಾಹಿತಿಗಾಗಿ ನಿರೀಕ್ಷಿಸಲಾಗಿದೆ.