ಕಲಬುರಗಿ: ಸಾಲಬಾಧೆ ತಾಳದೆ ರೈತನೋರ್ವ ಆತ್ಮಹತ್ಯೆಗೆ ಶರಣಾದ ಘಟನೆ ಅಫಜಲಪೂರ ತಾಲೂಕಿನ ಸಾಗನೂರ ಗ್ರಾಮದಲ್ಲಿ ನಡೆದಿದೆ.
ಮಲ್ಲಿಕಾರ್ಜುನ ಚಕ್ರ (51) ಮೃತ ರೈತ. ಎಸ್ಬಿಎಚ್ ಬ್ಯಾಂಕ್ ಸೇರಿದಂತೆ ವಿವಿಧ ಖಾಸಗಿಯಾಗಿ ₹ 9 ಲಕ್ಷ ಸಾಲ ಮಾಡಿಕೊಂಡಿದ್ದ ಎನ್ನಲಾಗಿದೆ.
ಸಾಲ ಮಾಡಿ ಕಷ್ಟಪಟ್ಟು ಬೆಳೆ ಬೆಳೆಯ ವೈಫಲ್ಯದಿಂದಾಗಿ ಮನನೊಂದು ಮರಕ್ಕೆ ನೇಣು ಹಾಕಿಕೊಂಡಿದ್ದಾರೆ. ಗಾಣಗಾಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.