ಪಣಜಿ (ಗೋವಾ): ಇಲ್ಲಿನ ಪೆರ್ನೆಮ್ ಪ್ರದೇಶದಲ್ಲಿ ಆಯೋಜಿಸಲಾಗಿದ್ದ ಗೂಳಿಕಾಳಗದಲ್ಲಿ ಒಂದು ಗೂಳಿ ಸಾವನ್ನಪ್ಪಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರನ್ನು ಗೋವಾ ಪೊಲೀಸರು ಬಂಧಿಸಿದ್ದಾರೆ.
ಜನವರಿ 4 ರಂದು ಕಾಳಗ ನಡೆದಿದ್ದು, ಗೂಳಿ ಮೃತಪಟ್ಟಿರುವ ಬಗ್ಗೆ ಮಾಧ್ಯಮ ಮಿತ್ರರು ದೂರು ನೀಡಿದ್ದರು. ಪ್ರಕರಣ ದಾಖಲಿಸಿಕೊಂಡು, ಗೂಳಿಗಳ ಇಬ್ಬರು ಮಾಲೀಕರನ್ನು ಬಂಧಿಸಲಾಗಿದೆ. ಕಾಳಗ ಆಯೋಜಕನ ವಿರುದ್ಧವೂ ಎಫ್ಐಆರ್ ದಾಖಲಾಗಿದೆ ಎಂದು ಪೊಲೀಸ್ ಇನ್ಸ್ಪೆಕ್ಟರ್ ಜೀವ್ಬಾ ದಾಲ್ವಿ ಹೇಳಿದ್ದಾರೆ.
ಇದನ್ನೂ ಓದಿ: ರೈಲಿನಡಿ ಸಿಲುಕುತ್ತಿದ್ದ ಮಹಿಳೆಯ ಜೀವ ಉಳಿಸಿದ ಆರ್‌ಪಿಎಫ್ ಸಿಬ್ಬಂದಿ
ಮೃತ ಗೂಳಿಯ ಕಳೇಬರವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದ್ದು, ತನಿಖೆ ಮುಂದುವರೆದಿದೆ ಎಂದು ದಾಲ್ವಿ ತಿಳಿಸಿದ್ದಾರೆ.