ನಲ್ಗೊಂಡ(ತೆಲಂಗಾಣ): ಕಾರು ಪಲ್ಟಿಯಾಗಿ ಸ್ಥಳದಲ್ಲೇ ಐದು ಮಂದಿ ಮೃತಪಟ್ಟಿರುವ ಘಟನೆ ತೆಲಂಗಾಣದ ನಲ್ಗೊಂಡ ಜಿಲ್ಲೆಯ ಹೈದರಾಬಾದ್-ನಾಗಾರ್ಜುನಸಾಗರ ರಸ್ತೆಯಲ್ಲಿ ಸಂಭವಿಸಿದೆ.
ಮೃತರ ಪೈಕಿ ಮೂವರನ್ನು ಭರತ್, ನಾಗೇಂದ್ರ, ಗಣೇಶ್ ಎಂದು ಗುರುತಿಸಲಾಗಿದೆ. ಘಟನಾ ಸ್ಥಳಕ್ಕೆ ಪೊಲೀಸರು ದೌಡಾಯಿಸಿದ್ದು, ಪರಿಶೀಲನೆ ಕೈಗೊಂಡಿದ್ದಾರೆ.
ನಿದ್ರೆಯ ಮಂಪರಿನಲ್ಲಿ ಹಾಗೂ ವೇಗವಾಗಿ ಕಾರು ಚಲಾಯಿಸಿದ್ದೇ ಘಟನೆಗೆ ಕಾರಣ ಎಂದು ಪೊಲೀಸರು ತಿಳಿಸಿದ್ದಾರೆ.