ಪಶ್ಚಿಮ ಬಂಗಾಳ: ಕಾರು ಹಾಗೂ ಬಸ್ ಡಿಕ್ಕಿಯಾದ ಪರಿಣಾಮ ಒಂದೇ ಕುಟುಂಬದ ಐವರು ಸಾವನ್ನಪ್ಪಿರುವ ಘಟನೆ ಪಶ್ಚಿಮ ಬಂಗಾಳದಲ್ಲಿ ನಡೆದಿದೆ.
ಫಲಕಟದ ಬಾಲಸುಂದರ್ ಪ್ರದೇಶದಲ್ಲಿ ಅಪಘಾತ ನಡೆದಿದ್ದು, ಕಾರಿನಲ್ಲಿ ಫಲಕಟಾದಿಂದ ಸಿಲಿಗುರಿಗೆ ತೆರಳುತ್ತಿದ್ದ ಒಂದೇ ಕುಟುಂಬದ ಐವರು ಸದಸ್ಯರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಕಾರಿಗೆ ಬಸ್ ಗುದ್ದಿ ಹೋಗಿರುವುದಾಗಿ ಸ್ಥಳೀಯರು ತಿಳಿಸಿದ್ದಾರೆ. ಘಟನಾ ಸ್ಥಳಕ್ಕೆ ದೌಡಾಯಿಸಿದ ಪೊಲೀಸರು ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಮುಂದುವರೆಸಿದ್ದಾರೆ.