ಗ್ವಾಲಿಯರ್ (ಮಧ್ಯಪ್ರದೇಶ): ಭೀಕರ ರಸ್ತೆ ಅಪಘಾತದಲ್ಲಿ ನಾಲ್ವರು ಯುವಕರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಮಧ್ಯಪ್ರದೇಶದ ಗ್ವಾಲಿಯರ್ನಲ್ಲಿ ನಡೆದಿದೆ.
ಗ್ವಾಲಿಯರ್ ಜೌರಸಿ ಪ್ರದೇಶದ ಬಳಿ ತಡರಾತ್ರಿ ಅಪಘಾತ ಸಂಭವಿಸಿದ್ದು, ಇನ್ನೋರ್ವ ಯುವಕನ ಸ್ಥಿತಿ ಗಂಭೀರವಾಗಿದೆ. ಮೃತರನ್ನು ಶಿವಂ ಪುತ್ರ ಶರ್ಮಾ (30), ನವಜೋತ್ ಸಿಖ್ (27), ಶಿವಂ ಖಾಗಟ್ (30), ಕಾರ್ತಿಕ್ ಪಾಲೀವಾಲ್ ಎಂದು ಗುರುತಿಸಲಾಗಿದೆ.
ಇದನ್ನೂ ಓದಿ: ಟ್ರ್ಯಾಕ್ಟರ್‌ಗೆ ಬೈಕ್ ಡಿಕ್ಕಿ : ಸ್ಥಳದಲ್ಲೇ ಮೃತಪಟ್ಟ ಸವಾರ
ಇವರೆಲ್ಲರೂ ಸ್ನೇಹಿತರಾಗಿದ್ದು, ಕಾರಿನಲ್ಲಿ ಗ್ವಾಲಿಯರ್ನಿಂದ ದಬ್ರಾಗೆ ತೆರಳುತ್ತಿದ್ದರು. ಜೌರಸಿ ಬಳಿ ಚಾಲಕನ ನಿಯಂತ್ರಣ ತಪ್ಪಿ ಕಾರು ಹಳ್ಳಕ್ಕೆ ಬಿದ್ದ ಪರಿಣಾಮ ಅವಘಡ ನಡೆದಿದೆ. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿರುವ ದಬ್ರಾ ಪೊಲೀಸರು ತನಿಖೆ ಮುಂದುವರೆಸಿದ್ದಾರೆ.