ಬುಲಂದ್‌ಶಹರ್ (ಉತ್ತರ ಪ್ರದೇಶ): ವಿಷಪೂರಿತ ಮದ್ಯ ಸೇವಿಸಿ ನಾಲ್ವರು ಮೃತಪಟ್ಟಿದ್ದು, ಅನೇಕರು ಅಸ್ವಸ್ಥಗೊಂಡಿರುವ ಘಟನೆ ಉತ್ತರ ಪ್ರದೇಶದ ಬುಲಂದ್‌ಶಹರ್ ಜಿಲ್ಲೆಯಲ್ಲಿ ನಡೆದಿದೆ.
ಬುಲಂದ್‌ಶಹರ್ ಜಿಲ್ಲೆಯ ಜೀತ್‌ಗಢಿ ಎಂಬ ಗ್ರಾಮದಲ್ಲಿ ಅಕ್ರಮವಾಗಿ ಸ್ಥಳೀಯ ಮದ್ಯ ಮಾರಾಟ ಮಾಡಲಾಗುತ್ತಿತ್ತು. ಇದನ್ನು ಕುಡಿದವರೆಲ್ಲಾ ಅನಾರೋಗ್ಯಕ್ಕೆ ತುತ್ತಾಗಿದ್ದು, ಗಂಭೀರವಾಗಿದ್ದ ನಾಲ್ವರು ಮೃತಪಟ್ಟಿದ್ದಾರೆ.
ಇದನ್ನೂ ಓದಿ - ಬೆಳ್ತಂಗಡಿ: ಕುಡಿದ ಅಮಲಿನಲ್ಲಿ ಪತ್ನಿಕೊಂದ ಪತಿ: ಆರೋಪ
ಅಸ್ವಸ್ಥಗೊಂಡಿರುವವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.