ಅನೂಪ್ಪುರ್ (ಮಧ್ಯಪ್ರದೇಶ): ಹೆತ್ತ ಅಪ್ಪ-ಅಮ್ಮ ಹಾಗೂ ಒಡಹುಟ್ಟಿದ ತಂಗಿಯನ್ನು ಬೆಂಕಿ ಹಚ್ಚಿ ಸುಟ್ಟು ಬಳಿಕ ತಾನೂ ನೇಣು ಬಿಗಿದುಕೊಂಡು ಯುವಕನೊಬ್ಬ ಆತ್ಮಹತ್ಯೆಗೆ ಶರಣಾಗಿದ್ದಾನೆ.
ಮಧ್ಯಪ್ರದೇಶದ ಅನೂಪ್ಪುರ್ ಜಿಲ್ಲೆಯಲ್ಲಿ ಘಟನೆ ನಡೆದಿದೆ. ಯುವಕನ ಈ ಕೃತ್ಯಕ್ಕೆ ಕಾರಣ ತಿಳಿದು ಬಂದಿಲ್ಲ. ತಂದೆ - ತಾಯಿ, ತಂಗಿಯನ್ನು ಮನೆಯ ಕೋಣೆಯೊಳಗೆ ಕೂಡಿ ಹಾಕಿ ಬೆಂಕಿ ಹಚ್ಚಿದ್ದಾನೆ. ನಂತರ ಇನ್ನೊಂದು ಕೋಣೆಯೊಳಗೆ ನೇಣು ಬಿಗಿದುಕೊಂಡು ಆತ ಸಾವನ್ನಪ್ಪಿದ್ದಾನೆ.
ಮೃತಪಟ್ಟ ಯುವಕನ ತಂದೆ, ತಾಯಿ, ತಂಗಿಯನ್ನು ಓಂಕಾರ್ (46), ಕಸ್ತೂರಿಯಾ ಬಾಯಿ (40 ), ನಿಧಿ (16) ಎಂದು ಗುರುತಿಸಲಾಗಿದೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿದ್ದು, ಪರಿಶೀಲನೆ ನಡೆಸುತ್ತಿದ್ದಾರೆ. ಹೆಚ್ಚಿನ ಮಾಹಿತಿಗಾಗಿ ನಿರೀಕ್ಷಿಸಲಾಗಿದೆ.