ಜಾರ್ಖಂಡ್: ಪತಿ, ಪತ್ನಿ ಸೇರಿ ನಾಲ್ವರು ಕೊಲೆಯಾಗಿರುವ ಘಟನೆ ಜಾರ್ಖಂಡ್ನ ಗುಮ್ಲಾ ಜಿಲ್ಲೆಯ ಡೆರಂಗ್ಡಿಹ್ ಎಂಬ ಗ್ರಾಮದಲ್ಲಿ ನಡೆದಿದೆ.
ಸೋಮವಾರ ರಾತ್ರಿ ಘಟನೆ ನಡೆದಿದ್ದು, ಅಕ್ರಮ ಸಂಬಂಧದ ಹಿನ್ನೆಲೆ ಕೃತ್ಯ ಎಸಗಲಾಗಿದೆ ಎಂದು ಸ್ಥಳೀಯರು ಸಂಶಯ ವ್ಯಕ್ತಪಡಿಸಿದ್ದಾರೆ.
ಘಟನಾ ಸ್ಥಳಕ್ಕೆ ಧಾವಿಸಿರುವ ರೈದಿಹ್ ಠಾಣೆ ಪೊಲೀಸರು ಪರಿಶೀಲನೆ ನಡೆಸಿದ್ದಾರೆ. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡು, ತನಿಖೆ ಆರಂಭಿಸಿದ್ದಾರೆ. ಹೆಚ್ಚಿನ ಮಾಹಿತಿಗಾಗಿ ನಿರೀಕ್ಷಿಸಲಾಗಿದೆ.