ETV Bharat / jagte-raho

ಅಪಹಾಸ್ಯದ ವಿಡಿಯೋ ಶೇರ್​: ಬಿಜೆಪಿ ಕಾರ್ಯಕರ್ತನ ಮೇಲೆ ಕೈ ಕಾರ್ಯಕರ್ತನಿಂದ ಹಲ್ಲೆ? - ಗದಗ ರಾಜಕೀಯ

ಕಾಂಗ್ರೆಸ್ ಕಾರ್ಯಕರ್ತ ಕಾರ್ತಿಕ್ ಗುಜಮಾಗಡಿ ಹಾಗೂ ಆತನ ಸಹಚರಿಬ್ಬರು ಸೇರಿ ಗದಗ ಜಿಲ್ಲೆಯ ಬಿಜೆಪಿ ಯುವ ಮೋರ್ಚಾ ಕಾರ್ಯದರ್ಶಿ ಪಂಚಾಕ್ಷರಿ ಅಂಗಡಿ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಬಿಜೆಪಿ ಕಾರ್ಯಕರ್ತರು ಆರೋಪ ಮಾಡಿದ್ದಾರೆ.

BJP worker alleges congress worker of assault for sharing mocking video
ಬಿಜೆಪಿ ಕಾರ್ಯಕರ್ತನ ಮೇಲೆ ಕೈ ಕಾರ್ಯಕರ್ತನಿಂದ ಹಲ್ಲೆ ಆರೋಪ
author img

By

Published : Dec 15, 2020, 7:46 AM IST

ಗದಗ: ಕಾಂಗ್ರೆಸ್‌ ಮುಖಂಡರೊಬ್ಬರನ್ನು ಅಪಹಾಸ್ಯ ಮಾಡಿರುವ ವಿಡಿಯೋವನ್ನು ಸಾಮಾಜಿಕ ಜಾಲತಾಣಗಳಲ್ಲಿ ಶೇರ್ ಮಾಡಿದ್ದಕ್ಕೆ ನಗರದ ಬಿಜೆಪಿ ಕಾರ್ಯಕರ್ತರೊಬ್ಬರ ಮೇಲೆ ಕಾಂಗ್ರೆಸ್ ಕಾರ್ಯಕರ್ತ ಹಲ್ಲೆ ಮಾಡಿರುವ ಆರೋಪ ಕೇಳಿ ಬಂದಿದೆ.

ಕಾಂಗ್ರೆಸ್ ಕಾರ್ಯಕರ್ತ ಕಾರ್ತಿಕ್ ಗುಜಮಾಗಡಿ ಹಾಗೂ ಆತನ ಸಹಚರಿಬ್ಬರು ಸೇರಿ ಗದಗ ಜಿಲ್ಲೆಯ ಬಿಜೆಪಿ ಯುವ ಮೋರ್ಚಾ ಕಾರ್ಯದರ್ಶಿ ಪಂಚಾಕ್ಷರಿ ಅಂಗಡಿ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಬಿಜೆಪಿ ಕಾರ್ಯಕರ್ತರು ಆರೋಪ ಮಾಡಿದ್ದಾರೆ.

ಬಿಜೆಪಿ ಕಾರ್ಯಕರ್ತನ ಮೇಲೆ ಕೈ ಕಾರ್ಯಕರ್ತನಿಂದ ಹಲ್ಲೆ ಆರೋಪ

ಸಿನಿಮಾ ಡೈಲಾಗ್​​ನೊಂದಿಗೆ ಶಾಸಕ ಹೆಚ್.ಕೆ. ಪಾಟೀಲ್​​ಗೆ ಬಿಜೆಪಿ ಮುಖಂಡ ಅನಿಲ್ ಮೆಣಸಿನಕಾಯಿ ಅಪಹಾಸ್ಯ ಮಾಡಿ ಎಡಿಟ್ ಮಾಡಿರುವ ವಿಡಿಯೋವನ್ನು ಶೇರ್​ ಮಾಡಿದ್ದಕ್ಕೆ ಸಿಟ್ಟಿಗೆದ್ದ ಕೈ ಕಾರ್ಯಕರ್ತರು ಹಲ್ಲೆ ನಡೆಸಿದ್ದಾರೆ. ರಾಚೋಟೇಶ್ವರ ನಗರದ ಒಕ್ಕಲಗೇರಿ ಓಣಿಯಲ್ಲಿರುವ ಪಂಚಾಕ್ಷರಿ ಅವರ ಮನೆಯೊಳಗೆ ನುಗ್ಗಿ, ಅವರನ್ನು ಮನೆಯಿಂದ ಹೊರಗೆ ಎಳೆದುಕೊಂಡು ಬಂದು ಹಿಗ್ಗಾಮುಗ್ಗಾ ಥಳಿಸಿದ್ದಾರೆ ಎನ್ನಲಾಗ್ತಿದೆ.

ಇದನ್ನೂ ಓದಿ: ಹಾವೇರಿ ಕಾರಾಗೃಹದಲ್ಲಿ ಜೈಲು ಅಧೀಕ್ಷಕ ಮತ್ತು ಜೈಲು ಸಿಬ್ಬಂದಿ ನಡುವೆ ಡಿಶುಂ.. ಡಿಶುಂ!

ಹಲ್ಲೆ ಖಂಡಿಸಿ ಗದಗ ಶಹರ ಪೊಲೀಸ್ ಠಾಣೆಯಲ್ಲಿ ಜಮಾಯಿಸಿದ ಬಿಜೆಪಿ ಮುಖಂಡರು ಹಾಗೂ ಕಾರ್ಯಕರ್ತರು ಆರೋಪಿಗಳನ್ನು ಬಂಧಿಸಬೇಕೆಂದು ಒತ್ತಾಯಿಸಿದ್ದಾರೆ. ಘಟನೆ ವೇಳೆ ಗಾಯಗೊಂಡ ಪಂಚಾಕ್ಷರಿ ಅಂಗಡಿ ಹಾಗೂ ಮತ್ತಿಬ್ಬರನ್ನು ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಿಸಲಾಗಿದೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.