ಜಿಲ್ಲೆಯ ಬೊಪ್ಪಾರಂ ಗ್ರಾಮದ ಮೂಕ ಯುವತಿಯೊಂದಿಗೆ ಅದೇ ಗ್ರಾಮದ ಐವರು ಪರಿಚಯ ಬೆಳಸಿಕೊಂಡಿದ್ದಾರೆ. ಯುವತಿಯ ತಂದೆ-ತಾಯಿ ಕೂಲಿ ಕೆಲಸಕ್ಕೆಂದು ತೆರಳಿದ್ದಾಗ ಈ ಐವರು ಯುವತಿಯ ಮನೆಗೆ ಬಂದು ಹೋಗುತ್ತಿದ್ದರು. ಒಂದು ದಿನ ಯುವತಿಯ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿ ಯಾರಿಗೂ ಹೇಳದಂತೆ ಬೆದರಿಕೆ ಹಾಕಿದ್ದಾರೆ.
ವಿಕಲಚೇತನ ಯುವತಿ ಗರ್ಭವತಿಯಾದ ಬಳಿಕ ಈ ವಿಷಯ ಬೆಳಕಿಗೆ ಬಂದಿದೆ. ಕೂಡಲೇ ಯುವತಿ ಪೋಷಕರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಪೊಲೀಸರು ತನಿಖೆ ಕೈಗೊಂಡು ಐವರು ಆರೋಪಿಗಳನ್ನು ಬಂಧಿಸಿ ಕೋರ್ಟ್ಗೆ ಹಾಜರು ಪಡಿಸಿದ್ದಾರೆ.