ಚಿಕ್ಕಬಳ್ಳಾಪುರ: ಕೂಲಿ ಕೆಲಸ ಮಾಡುತ್ತಲೇ ಮನೆ ಹಿತ್ತಲಲ್ಲಿ ಗಾಂಜಾ ಬೆಳೆದಿದ್ದ ವ್ಯಕ್ತಿಯನ್ನ ಪೊಲೀಸರು ಬಂಧಿಸಿರುವ ಘಟನೆ ಚಿಂತಾಮಣಿ ತಾಲೂಕಿನ ಮುದ್ದಲಹಳ್ಳಿ ಗ್ರಾಮ ವ್ಯಾಪ್ತಿಯಲ್ಲಿ ನಡೆದಿದೆ.
ಮುದ್ದಲಹಳ್ಳಿ ಗ್ರಾಮದ ನಿವಾಸಿ ಮುನಿಯಪ್ಪ (55) ಕೂಲಿ ಕೆಲಸ ಮಾಡುತ್ತಲೇ ಮನೆಯ ಹಿತ್ತಲನಲ್ಲಿ ಅನಧಿಕೃತವಾಗಿ ಗಾಂಜಾವನ್ನು ಬೆಳಿಸಿದ್ದನು. ಈ ಬಗ್ಗೆ ಗ್ರಾಮಸ್ಥರು ಪೊಲೀಸರಿಗೆ ಮಾಹಿತಿ ತಿಳಿಸಿದ್ದರು.
ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದಾಗ ಗಾಂಜಾ ಗಿಡಗಳನ್ನು ದೊರೆತ್ತಿದ್ದು, ಅವುಗಳನ್ನು ವಶಪಡಿಸಿಕೊಂಡು ಆರೋಪಿಯನ್ನು ಸೆರೆ ಹಿಡಿದಿದ್ದಾರೆ.
ಈ ಘಟನೆ ಕುರಿತು ಬಟ್ಲಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.