ಗದಗ: ಕೆಎಸ್ಆರ್ಟಿಸಿ ಬಸ್ ಸ್ಟೇರಿಂಗ್ ಕಟ್ ಆಗಿ ಉರುಳಿ ಬಿದ್ದ ಪರಿಣಾಮ ಸ್ಥಳದಲ್ಲೇ ಶಾಲಾ ವಿದ್ಯಾರ್ಥಿನಿ ಮೃತಪಟ್ಟು, 20ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡಿರುವ ಘಟನೆ ಜಿಲ್ಲೆಯ ಶಿರಹಟ್ಟಿ ತಾಲೂಕಿನ ಹಂಗನಕಟ್ಟಿ ಗ್ರಾಮದ ಬಳಿ ನಡೆದಿದೆ.
ಜಲಿಗೇರಿ ಗ್ರಾಮದ ನಿವಾಸಿ ವಿದ್ಯಾ (15) ಮೃತಪಟ್ಟ ಬಾಲಕಿ. ಬಸ್ ಚಾಲಕ ಶಿವಾನಂದ ಗಂಭೀರವಾಗಿ ಗಾಯಗೊಂಡಿದ್ದಾರೆ. ಬಸ್ನಲ್ಲಿ ಪ್ರಯಾಣಿಸುತ್ತಿದ 20ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡಿದ್ದು, ಶಿರಹಟ್ಟಿ ತಾಲೂಕು ಆಸ್ಪತ್ರೆಗೆ ದಾಖಲಿಸಲಾಗಿದೆ. ಮುಳಗುಂದ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ಸಂಭವಿಸಿದೆ.