ETV Bharat / jagte-raho

ಹಥ್ರಾಸ್ ಪ್ರಕರಣ: ಸಂತ್ರಸ್ತೆ ಗ್ರಾಮಕ್ಕೆ ಇಂದು ಸಿಬಿಐ ಭೇಟಿ ನೀಡುವ ಸಾಧ್ಯತೆ - ಕೇಂದ್ರ ತನಿಖಾ ದಳ

ಭಾನುವಾರ ಸಿಬಿಐ ತಂಡ ಹಥ್ರಾಸ್​ಗೆ ಬಂದಿದ್ದು, ಚಂದಪಾ ಪೊಲೀಸ್ ಠಾಣೆಯಿಂದ ಪ್ರಕರಣಕ್ಕೆ ಸಂಬಂಧಿಸಿದ ಕೆಲ ದಾಖಲಾತಿಗಳನ್ನು ತೆಗೆದುಕೊಂಡು ಹೋಗಿದ್ದಾರೆ. ಹೀಗಾಗಿ ಇಂದು ಸಂತ್ರಸ್ತೆಯ ಗ್ರಾಮವಾದ ಬುಲ್ಗಡಿಗೆ ಭೇಟಿ ನೀಡುವ ಸಾಧ್ಯತೆಯಿದೆ ಎಂದು ಹಥ್ರಾಸ್ ಪೊಲೀಸ್​ ವರಿಷ್ಠಾಧಿಕಾರಿ ತಿಳಿಸಿದ್ದಾರೆ.

CBI
ಸಿಬಿಐ
author img

By

Published : Oct 12, 2020, 4:24 PM IST

ಹಥ್ರಾಸ್: ಉತ್ತರ ಪ್ರದೇಶದ ಹಥ್ರಾಸ್​ನಲ್ಲಿ ದಲಿತ ಯುವತಿ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಹಾಗೂ ಕೊಲೆ ಪ್ರಕರಣದ ತನಿಖೆಯನ್ನು ವಹಿಸಿಕೊಂಡಿರುವ ಕೇಂದ್ರ ತನಿಖಾ ದಳ (ಸಿಬಿಐ) ಇಂದು ಸಂತ್ರಸ್ತೆಯ ಗ್ರಾಮವಾದ ಬುಲ್ಗಡಿಗೆ ಭೇಟಿ ನೀಡುವ ಸಾಧ್ಯತೆಯಿದೆ.

ಭಾನುವಾರ ಸಿಬಿಐ ತಂಡ ಹಥ್ರಾಸ್​ಗೆ ಬಂದಿದ್ದು, ಚಂದಪಾ ಪೊಲೀಸ್ ಠಾಣೆಯಿಂದ ಪ್ರಕರಣಕ್ಕೆ ಸಂಬಂಧಿಸಿದ ಕೆಲ ದಾಖಲಾತಿಗಳನ್ನು ತೆಗೆದುಕೊಂಡು ಹೋಗಿದ್ದಾರೆ. ಹೀಗಾಗಿ ಇಂದು ಬುಲ್ಗಡಿ ಗ್ರಾಮಕ್ಕೆ ಭೇಟಿ ನೀಡಬಹುದು. ಇವರೊಂದಿಗೆ ವಿಧಿವಿಜ್ಞಾನ ತಂಡ ಕೂಡ ಪರಿಶೀಲನೆಗೆ ಬರಬಹುದು ಎಂದು ಹಥ್ರಾಸ್ ಪೊಲೀಸ್​ ವರಿಷ್ಠಾಧಿಕಾರಿ ವಿನೀತ್​ ಜೈಸ್ವಾಲ್​​ ಹೇಳಿದ್ದಾರೆ.

ಸೆಪ್ಟೆಂಬರ್​ 14ರಂದು ಉತ್ತರ ಪ್ರದೇಶದ ಹಥ್ರಾಸ್‌ನಲ್ಲಿ 19 ವರ್ಷದ ಯುವತಿಯ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿದ ಕಾಮುಕರು, ಆಕೆ ಮೇಲೆ ಬರ್ಬರವಾಗಿ ಹಲ್ಲೆ ನಡೆಸಿದ್ದರು. ಗಂಭೀರವಾಗಿ ಗಾಯಗೊಂಡಿದ್ದ ಸಂತ್ರಸ್ತೆ ದೆಹಲಿಯ ಸಫ್ತರ್​ಜಂಗ್​ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಳು. ಮೃತದೇಹವನ್ನು ಸಂತ್ರಸ್ತೆಯ ಕುಟುಂಬಕ್ಕೆ ಹಸ್ತಾಂತರಿಸದೇ ಅಂತ್ಯಕ್ರಿಯೆ ನೆರವೇರಿಸಲಾಗಿತ್ತು.

ಉತ್ತರ ಪ್ರದೇಶ ಸರ್ಕಾರದ ಮನವಿ ಹಾಗೂ ಅಧಿಸೂಚನೆ ಮೇರೆಗೆ ಸಿಬಿಐ ಪ್ರಕರಣದ ತನಿಖೆಯ ಹೊಣೆ ಹೊತ್ತಿದ್ದು, ತನಿಖೆಗಾಗಿ ವಿಶೇಷ ತಂಡವೊಂದನ್ನು ಸಹ ರಚಿಸಿದೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.