ಹಿರಿಯೂರು: ಅಪರಿಚಿತ ವಾಹನ ಡಿಕ್ಕಿಯಾದ ಪರಿಣಾಮ ಪಾದಚಾರಿ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಗರದ ಅಬಕಾರಿ ಕಚೇರಿ ಬಳಿಯ ರಾಷ್ಟೀಯ ಹೆದ್ದಾರಿ ನಾಲ್ಕರಲ್ಲಿ ನಡೆದಿದೆ.
ಪರಮೇಶ್ವರಪ್ಪ (65) ಅಪಘಾತದಲ್ಲಿ ಮೃತಪಟ್ಟ ದುರ್ದೈವಿ. ಪಾದಚಾರಿಗೆ ಡಿಕ್ಕಿ ಹೊಡೆದ ಅಪರಿಚಿತ ವಾಹನದ ಸಮೇತ ಚಾಲಕ ಪರಾರಿಯಾಗಿದ್ದು, ಹೆಚ್ಚಿನ ಮಾಹಿತಿ ತಿಳಿದು ಬಂದಿಲ್ಲ. ಘಟನಾ ಸ್ಥಳಕ್ಕೆ ಹಿರಿಯೂರು ಠಾಣಾ ಪೋಲಿಸರು ಭೇಟಿ ನೀಡಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ.