ನೆಲಮಂಗಲ: ಮೂರು ಮನೆಗಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ದಾಬಸ್ ಪೇಟೆ ಪೊಲೀಸರು ಆರೋಪಿಯನ್ನ ಬಂಧಿಸುವಲ್ಲಿ ಯಶಸ್ವಿಯಾಗಿದ್ದು, ಆರೋಪಿಯಿಂದ 8ಲಕ್ಷ 30 ಸಾವಿರ ರೂ. ಮೌಲ್ಯದ ಚಿನ್ನಾಭರಣ ವಶ ಪಡಿಸಿಕೊಂಡಿದ್ದಾರೆ.
ದಾಬಸ್ ಪೇಟೆ ಟೌನ್, ಮರಳಕುಂಟೆ, ನರಸಿಪುರ ಗ್ರಾಮಗಳಲ್ಲಿ ನಡೆದ ಮನೆಗಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ತುಮಕೂರು ಕೋತಿ ತೋಪಿನ ಮಂಜುನಾಥ್ (34) ಎಂಬ ಆರೋಪಿಯನ್ನ ಬಂಧಿಸಲಾಗಿದೆ.
ಮನೆಯಲ್ಲಿ ಯಾರೂ ಇಲ್ಲದ ವೇಳೆ ಬಾಗಿಲು ಒಡೆದು ಮನೆಗೆ ನುಗ್ಗುತ್ತಿದ್ದ ಆರೋಪಿ ಚಿನ್ನಾಭರಣ, ಮೊಬೈಲ್, ನಗದು ಹಣ ದೋಚಿ ಪರಾರಿಯಾಗಿದ್ದ. ಬಂಧಿತನಿಂದ 173 ಗ್ರಾಂ ತೂಕದ 8 ಲಕ್ಷ 30 ಸಾವಿರ ರೂ. ಮೌಲ್ಯದ ಚಿನ್ನಾಭರಣ ವಶಪಡಿಸಿಕೊಳ್ಳಲಾಗಿದೆ. ದಾಬಸ್ ಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.