ಮಂಗಳೂರು: ಹೈದರಾಬಾದ್‌ನಿಂದ ಮಂಗಳೂರಿಗೆ ಗಾಂಜಾ ಸಾಗಾಟ ಮಾಡುತ್ತಿದ್ದ ಇಬ್ಬರನ್ನು ಮಂಗಳೂರಿನ ಇಕೊನಾಮಿಕ್ ಅಂಡ್ ನಾರ್ಕೋಟಿಕ್ ಕ್ರೈಂ ಪೊಲೀಸರು ಬಂಧಿಸಿದ್ದಾರೆ.

ಕೇರಳ ರಾಜ್ಯದ ಕಾಸರಗೋಡಿನ ಇಬ್ರಾಹಿಂ ಮಡನ್ನೂರು ಮತ್ತು ಅಬ್ದುಲ್ ನಿಜಾದ್ ಬಂಧಿತ ಆರೋಪಿಗಳು. ಮಂಗಳೂರಿನ ಪಡೀಲ್ ಜಂಕ್ಷನ್‌ನಿಂದ ಬಿಕರ್ನಕಟ್ಟೆ ಬರುವ ರಸ್ತೆಯಲ್ಲಿ ಪಡುಮರೋಳಿ ಸೂರ್ಯ ನಾರಾಯಣ ದೇವಸ್ಥಾನದ ದ್ವಾರದ ಬಳಿ ಪೊಲೀಸರು ಸೆರೆ ಹಿಡಿದಿದ್ದಾರೆ.
ಆರೋಪಿಗಳನ್ನು ಮಹಾರಾಷ್ಟ್ರ ನೋಂದಣಿಯ ಕಾರಿನಲ್ಲಿ ಹೈದರಾಬಾದ್‌ನಿಂದ ಮಂಗಳೂರು ನಗರ ಮತ್ತು ಕೇರಳ ರಾಜ್ಯಕ್ಕೆ ಗಾಂಜಾ ಸಾಗಾಟ ಮಾಡುತ್ತಿದ್ದರು. ಇವರಿಂದ 3.6 ಲಕ್ಷ ರೂ. ಮೌಲ್ಯದ 24 ಕೆಜಿ ಗಾಂಜಾ, 2 ಲಕ್ಷ ಮೌಲ್ಯದ ಟೂರಿಸ್ಟ್ ಕಾರು, 13 ಸಾವಿರ ರೂ. ಮೌಲ್ಯದ 3 ಮೊಬೈಲ್ ವಶಪಡಿಸಿಕೊಳ್ಳಲಾಗಿದೆ.
ಇದನ್ನೂ ಓದಿ: ಗಾಂಜಾ ಮತ್ತು ಡ್ರಗ್ ಚಾಕೋಲೆಟ್ ಮಾರಾಟ ಮಾಡುತ್ತಿದ್ದ ಗ್ಯಾಂಗ್ ಅಂದರ್