ಕಡಬ: ಕಡಬ ತಾಲೂಕಿನ ಕೊಯ್ಲ ಗ್ರಾಮದಲ್ಲಿ ಕಳ್ಳತನ ಮಾಡಿ ತಂದಿದ್ದ ಜಾನುವಾರು ಅಡ್ಡೆಗೆ ದಾಳಿಗೆ ನಡೆಸಿದ ಕಡಬ ಪೊಲೀಸರು ಓರ್ವನನ್ನು ಬಂಧಿಸಿದ್ದು, ಮತ್ತೋರ್ವ ಆರೋಪಿ ಪರಾರಿಯಾಗಿದ್ದಾನೆ.
ಮಹಮ್ಮದ್ ಮುಸ್ತಫಾ ಬಂಧಿತ ಆರೋಪಿ. ಇಲಿಯಾಸ್ ಪರಾರಿಯಾದ ಆರೋಪಿ. ಜಾನುವಾರು, ಕತ್ತಿ, ತೂಕದ ಮಾಪನಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಬೆಳಗಿನ ಜಾವ 4 ಗಂಟೆ ಸುಮಾರಿಗೆ ದಾಳಿ ಮಾಡಿದ ಪೊಲೀಸರು ದಾಳಿ ನಡೆಸಿದ್ದು, ಆರೋಪಿಗಳ ವಿರುದ್ಧ ಕಡಬ ಪೋಲಿಸ್ ಠಾಣೆಯಲ್ಲಿ ಕಳವು ಮತ್ತು ಪ್ರಾಣಿ ಹಿಂಸೆ ಪ್ರಕರಣ ದಾಖಲಾಗಿದೆ.