ETV Bharat / jagte-raho

ಪಾಟ್ನಾದಲ್ಲಿ ಜೆಡಿಯು ವಿದ್ಯಾರ್ಥಿ ಮುಖಂಡನ ಗುಂಡಿಕ್ಕಿ ಹತ್ಯೆ - Bihar crime news

ಹಳೇ ದ್ವೇಷದ ಹಿನ್ನೆಲೆಯಲ್ಲಿ ಜೆಡಿಯು ವಿದ್ಯಾರ್ಥಿ ಮುಖಂಡನ ಮೇಲೆ ದುಷ್ಕರ್ಮಿಗಳು ಗುಂಡು ಹಾರಿಸಿದ್ದು, ತೀವ್ರವಾಗಿ ಗಾಯಗೊಂಡಿದ್ದ ಅವರು ಪಾಟ್ನಾದ ಖಾಸಗಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.

JDU student leader shot dead in Patna
ಪಾಟ್ನಾದಲ್ಲಿ ಜೆಡಿಯು ವಿದ್ಯಾರ್ಥಿ ಮುಖಂಡನ ಗುಂಡಿಕ್ಕಿ ಹತ್ಯೆ
author img

By

Published : Jan 17, 2021, 12:07 PM IST

ಪಾಟ್ನಾ (ಬಿಹಾರ​): ಜನತಾದಳ (ಸಂಯುಕ್ತ) ಪಕ್ಷದ ವಿದ್ಯಾರ್ಥಿ ಮುಖಂಡ ಅಲೋಕ್ ತೇಜಸ್ವಿಯನ್ನು ದುಷ್ಕರ್ಮಿಗಳು ಗುಂಡಿಕ್ಕಿ ಕೊಂದಿರುವ ಘಟನೆ ಬಿಹಾರದ ಪಾಟ್ನಾದ ಬಕ್ತಿಯಾರ್ಪುರದಲ್ಲಿ ನಡೆದಿದೆ.

ನಿನ್ನೆ ರಾತ್ರಿ 11.30ರ ವೇಳೆಗೆ ಅಲೋಕ್ ಮನೆಯ ಎದುರೇ ದುಷ್ಕರ್ಮಿಗಳು ಗುಂಡು ಹಾರಿಸಿದ್ದಾರೆ. ತಕ್ಷಣವೇ ಅವರನ್ನು ಪಾಟ್ನಾದ ಖಾಸಗಿ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಆದರೆ ತೀವ್ರವಾಗಿ ಗಾಯಗೊಂಡಿದ್ದ ಅಲೋಕ್ ಮೃತಪಟ್ಟಿದ್ದಾರೆ.

ಇದನ್ನೂ ಓದಿ: ಅತ್ತೆ ಮೇಲೆ ಸೊಸೆ ದರ್ಪ: ಪೊರಕೆಯಿಂದ ಹಲ್ಲೆ ನಡೆಸಿದ ವಿಡಿಯೋ ವೈರಲ್​

ಹಳೇ ದ್ವೇಷದ ಕಾರಣ ಆರೋಪಿಗಳು ಕೃತ್ಯ ಎಸಗಿದ್ದಾರೆ ಎಂದು ಹೇಳಲಾಗಿದೆ. ಬಕ್ತಿಯಾರ್ಪುರ ಠಾಣಾ ಪೊಲೀಸರು ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿದ್ದು, ಆರೋಪಿಗಳಿಗಾಗಿ ಬಲೆ ಬೀಸಿದ್ದಾರೆ. ಕೆಲವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.