ಕಲಬುರಗಿ: ಮಟ್ಕಾ ನಡೆಸುತ್ತಿದ್ದ ಅಡ್ಡೆ ಮೇಲೆ ಪೊಲೀಸರು ದಾಳಿ ನಡೆಸಿ ಮೂವರನ್ನು ಬಂಧಿಸಿರುವ ಘಟನೆ ನಗರದ ಯದುಲ್ಲಾ ಕಾಲೋನಿಯಲ್ಲಿ ನಡೆದಿದೆ.
ಮಟ್ಕಾ ನಡೆಸುತ್ತಿದ್ದ ಬಗ್ಗೆ ಖಚಿತ ಮಾಹಿತಿ ಮೇರೆಗೆ ಐಪಿಎಸ್ ಅಂಶುಕುಮಾರ್ ಮಾರ್ಗದರ್ಶನದಲ್ಲಿ ಪೊಲೀಸರು ದಾಳಿ ನಡೆಸಿದ್ದಾರೆ. ಮಟ್ಕಾ ದಂಧೆಯಲ್ಲಿ ತೊಡಗಿದ್ದ ಖುದ್ದುಸ್, ಸಾಜೀದ್ ಮತ್ತು ಸಲೀನ್ ಎಂಬ ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ.
ಓದಿ: ಕುಡಿದ ಮತ್ತಿನಲ್ಲಿ ಪತ್ನಿಯ ಕತ್ತು ಹಿಸುಕಿ ಕೊಲೆಗೈದ ಪಾಪಿ ಪತಿ
ಮಟ್ಕಾ ದಂಧೆಗೆ ಬಳಸುತ್ತಿದ್ದ 4 ಮೊಬೈಲ್ ಹಾಗೂ 1.60 ಲಕ್ಷ ರೂ. ನಗದು ಜಪ್ತಿ ಮಾಡಿದ್ದಾರೆ. ಈ ಸಂಬಂಧ ರೋಜಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.