ಚಿಕ್ಕಮಗಳೂರು: ಚಾಲಕನ ನಿಯಂತ್ರಣ ತಪ್ಪಿದ ಖಾಸಗಿ ಬಸ್ ಪಲ್ಟಿಯಾಗಿ 15ಕ್ಕೂ ಹೆಚ್ಚು ಜನರು ಗಂಭೀರವಾಗಿ ಗಾಯಗೊಂಡಿರುವ ಘಟನೆ ತರೀಕೆರೆ ತಾಲೂಕಿನ ಕಲ್ಲತ್ತಿಗಿರಿ ಗ್ರಾಮದ ಬಳಿ ನಡೆದಿದೆ.
ತರೀಕೆರೆ ತಾಲೂಕಿನ ಲಿಂಗದಹಳ್ಳಿ ರಸ್ತೆಯಲ್ಲಿ ಬರುವ ಕಲ್ಲತ್ತಿಗಿರಿ ಗ್ರಾಮದ ಬಳಿ ಈ ದುರಂತ ನಡೆದಿದ್ದು, ಚಾಲಕನ ನಿಯಂತ್ರಣ ತಪ್ಪಿ ರಸ್ತೆಯಲ್ಲಿಯೇ ಬಸ್ ಪಲ್ಟಿಯಾಗಿದೆ. ಬಸ್ನಲ್ಲಿದ್ದಂತಹ 15ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡಿದ್ದು, ಗಾಯಾಳುಗಳನ್ನು ತರೀಕೆರೆ ತಾಲೂಕು ಆಸ್ವತ್ರೆಗೆ ದಾಖಲು ಮಾಡಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಚಾಲಕನ ಅತಿಯಾದ ವೇಗವೇ ಅಪಘಾತಕ್ಕೆ ಕಾರಣ ಎಂದು ಹೇಳಲಾಗುತ್ತಿದ್ದು, ತರೀಕೆರೆ ಶಾಸಕ ಡಿ.ಎನ್.ಸುರೇಶ್ ಸ್ಥಳಕ್ಕೆ ಭೇಟಿ ನೀಡಿ ಗಾಯಾಳುಗಳಿಗೆ ಸಹಾಯ ಮಾಡಿದ್ದಾರೆ.