ವಯನಾಡ್ (ಕೇರಳ): ಅಬಕಾರಿ ಇಲಾಖೆ ಅಧಿಕಾರಿಗಳು ಭರ್ಜರಿ ಬೇಟೆಯಾಡಿದ್ದು, ಬರೋಬ್ಬರಿ 100 ಕೆಜಿ ಗಾಂಜಾ ವಶಪಡಿಸಿಕೊಂಡು ಇಬ್ಬರನ್ನು ಬಂಧಿಸಿದ್ದಾರೆ.
ಕೇರಳದ ವಯನಾಡ್ ಜಿಲ್ಲೆಯಲ್ಲಿ ಅಬಕಾರಿ ಸರ್ಕಲ್ ಇನ್ಸ್‌ಪೆಕ್ಟರ್ ಟಿ. ಅನಿಕುಮಾರ್ ನೇತೃತ್ವದಲ್ಲಿ ವಾಹನಗಳ ತಪಾಸಣೆ ಕೈಗೊಳ್ಳಲಾಗಿತ್ತು. ಈ ವೇಳೆ ಲಾರಿಯಲ್ಲಿ ಸಾಗಿಸುತ್ತಿದ್ದ ಕೋಟ್ಯಂತರ ಮೌಲ್ಯದ ಗಾಂಜಾ ವಶಕ್ಕೆ ಪಡೆದು, ಲಾರಿ ಚಾಲಕ ಸೇರಿದಂತೆ ಇಬ್ಬರನ್ನು ಅರೆಸ್ಟ್ ಮಾಡಿದ್ದಾರೆ. ಕೋಯಿಕೋಡ್ ನಿವಾಸಿಗಳಾದ ಸಲೇಹ್ ಮತ್ತು ಅಬಿದ್ ಬಂಧಿತ ಆರೋಪಿಗಳು.
ಇದನ್ನೂ ಓದಿ: ಕಾಡಿನಲ್ಲಿ ಗಾಂಜಾ ಬೆಳೆದು ಮಾರಾಟ: ಆರೋಪಿ ಅರೆಸ್ಟ್
ಕಳೆದ ತಿಂಗಳು ಎರ್ನಾಕುಲಂ ಪೊಲೀಸರು ಕೊಚ್ಚಿಯಲ್ಲಿ ಸುಮಾರು 140 ಕೆಜಿ ಗಾಂಜಾವನ್ನು ವಶಪಡಿಸಿಕೊಂಡು, ಮೂವರನ್ನು ಬಂಧಿಸಿದ್ದರು.