ರಾಮನಗರ: ನಿಂತಿದ್ದ ಟಿಪ್ಪರ್ ಲಾರಿಗೆ ಕೆಎಸ್ ಆರ್ ಟಿಸಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಬಸ್‌ನಲ್ಲಿ ಪ್ರಯಾಣಿಸುತ್ತಿದ್ದ 15 ಕ್ಕೂ ಹೆಚ್ಚು ಜನರಿಗೆ ಗಂಭೀರ ಗಾಯಗಳಾಗಿವೆ. ಗಾಯಾಳುಗಳನ್ನು ಸ್ಥಳೀಯ ಸರ್ಕಾರಿ ಆಸ್ಪತ್ರೆಗೆ ದಾಖಲು ಮಾಡಿದ್ದು ಚಿಕಿತ್ಸೆ ನೀಡಲಾಗುತ್ತಿದೆ.
ಚನ್ನಪಟ್ಟಣ ಟೌನ್ ವ್ಯಾಪ್ತಿಯ ಸಾತನೂರು ರಸ್ತೆ ಬದಿ ನಿಂತಿದ್ದ ಟಿಪ್ಪರ್‌ಗೆ ಹಿಂಬದಿಯಿಂದ ಕೆಎಸ್ ಆರ್ ಟಿಸಿ ಬಸ್ ಗುದ್ದಿದೆ. ಸಾತನೂರು ರಸ್ತೆಯ ಕಬ್ಬಾಳಿನಿಂದ ಚನ್ನಪಟ್ಟಣ ಮಾರ್ಗವಾಗಿ ಬರುತ್ತಿದ್ದ ವೇಳೆ ಈ ಘಟನೆ ನಡೆದಿದೆ. ಚಾಲಕ ಅಜಾಗರೂಕತೆಯಿಂದ ವೇಗವಾಗಿ ಬಸ್ ಚಾಲನೆ ಮಾಡಿದ್ದೇ ದುರ್ಘಟನೆಗೆ ಕಾರಣ ಎನ್ನಲಾಗಿದೆ.
ಸ್ಥಳಕ್ಕೆ ಚನ್ನಪಟ್ಟಣ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದು, ಪ್ರಕರಣ ದಾಖಲಾಗಿದೆ.