ಮಂಡ್ಯ: ಹಾಡಹಗಲೇ ವ್ಯಕ್ತಿಯನ್ನು ಮಚ್ಚಿನಿಂದ ಕೊಚ್ಚಿ ಕೊಲೆ ಮಾಡಿರುವ ಘಟನೆ ಮಳವಳ್ಳಿ ತಾಲೂಕಿನ ಹಲಗೂರು ಪಟ್ಟಣದಲ್ಲಿ ನಡೆದಿದೆ. ಈ ದೃಶ್ಯ ಮೊಬೈಲ್ನಲ್ಲಿ ಸೆರೆಯಾಗಿದೆ.
ಪಟ್ಟಣದ ಬಿ.ಕೆ ಪ್ರಾವಿಷನ್ ಸ್ಟೋರ್ನಲ್ಲಿ ಕೆಲಸ ಮಾಡುತ್ತಿದ್ದ ರಾಮನಗರ ಜಿಲ್ಲೆಯ ಕನಕಪುರ ತಾಲೂಕಿನ ದಾಳಿಂಬ ಗ್ರಾಮದ ನಿವಾಸಿ ರಾಮು(30) ಕೊಲೆಯಾದ ವ್ಯಕ್ತಿ.
ಅಂಗಡಿಗೆ ನುಗ್ಗಿದ ನಾಲ್ಕು ಮಂದಿ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡುತ್ತಿರುವ ದೃಶ್ಯ ಮೊಬೈಲ್ನಲ್ಲಿ ಸೆರೆಯಾಗಿದೆ. ಹಾಡಹಗಲೇ ನಡೆದ ಈ ಭೀಕರ ಘಟನೆಯಿಂದ ಸ್ಥಳೀಯರು ಆತಂಕಗೊಂಡಿದ್ದಾರೆ. ಅಷ್ಟೇ ಅಲ್ಲದೆ, ಕೊಲೆ ಮಾಡುತ್ತಿದ್ದ ವೇಳೆ ಫುಟ್ಪಾತ್ ಮೇಲೆ ಬರುವ ಸಾರ್ವಜನಿಕರನ್ನು ಬರಬೇಡಿ ಎಂದು ಓರ್ವ ದುಷ್ಕರ್ಮಿ ಎಚ್ಚರಿಕೆ ಕೊಡುತ್ತಿರುವ ದೃಶ್ಯವೂ ಸೆರೆಯಾಗಿದೆ.
ಇನ್ನು ಹತ್ಯೆಗೆ ಕಾರಣ ತಿಳಿದುಬಂದಿಲ್ಲ. ಸದ್ಯ ಘಟನಾ ಸ್ಥಳಕ್ಕೆ ಹಲಗೂರು ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಪ್ರಕರಣ ದಾಖಲು ಮಾಡಿಕೊಂಡು ಪೊಲೀಸರು ಆರೋಪಿಗಳ ಪತ್ತೆಗಾಗಿ ಕಾರ್ಯಾಚರಣೆ ಆರಂಭ ಮಾಡಿದ್ದಾರೆ.