ನೆಲಮಂಗಲ: ಲಾರಿ ಡಿಕ್ಕಿಯಾಗಿ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ನೆಲಮಂಗಲ ತಾಲೂಕಿನ ರಾಷ್ಟ್ರೀಯ ಹೆದ್ದಾರಿ 4ರ ಬೂದಿಹಾಳ್ ಗೇಟ್ ಬಳಿ ನಡೆದಿದೆ.
ಲಾರಿಗೆ ಬೈಕ್ ಡಿಕ್ಕಿಯಾದ ಪರಿಣಾಮ ಬೈಕ್ ಸವಾರ ಕೆಳಕ್ಕೆ ಬಿದ್ದಿದ್ದಾನೆ. ಆಗ ಲಾರಿ ಚಕ್ರ ವಾಹನ ಸವಾರನ ಮೇಲೆ ಹರಿದಿದೆ. ಪರಿಣಾಮ ಬೈಕ್ ಸವಾರ ಮೃತಪಟ್ಟಿದ್ದಾನೆ. ಮೃತರನ್ನು ಬೆಂಗಳೂರಿನ ಬಾಗಲುಕುಂಟೆ ನಿವಾಸಿ ನಿವೃತ್ತ ಪಿಎಸ್ಐ ರಾಮಮೂರ್ತಿ ಎಂದು ಗುರುತಿಸಲಾಗಿದೆ. ಶವವನ್ನು ನೆಲಮಂಗಲ ಸಾರ್ವಜನಿಕ ಆಸ್ಪತ್ರೆಗೆ ಸಾಗಿಸಲಾಗಿದೆ.
ಇದರಿಂದ ಕೆಲಕಾಲ ರಾಷ್ಟ್ರೀಯ ಹೆದ್ದಾರಿ 4ರಲ್ಲಿ ಟ್ರಾಫಿಕ್ ಜಾಮ್ ಸಂಭವಿಸಿತ್ತು. ನೆಲಮಂಗಲ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಲಾರಿ ಚಾಲಕನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಇದನ್ನೂ ಓದಿ: ವಿಧಿಯಾಟಕ್ಕೆ ಬಲಿ: ನಾಳೆ ಎಎಸ್ಐ ಆಗುವ ಖುಷಿಯಲ್ಲಿದ್ದ ಕಾನ್ಸ್ಟೇಬಲ್ ದುರ್ಮರಣ