ಮಂಡ್ಯ: ಪ್ರಿಯಕರ ಕೈಕೊಟ್ಟ ಹಿನ್ನೆಲೆ ಮನನೊಂದ ಯುವತಿಯೋರ್ವಳು ನೇಣಿಗೆ ಶರಣಾದ ಘಟನೆ ಶ್ರೀರಂಗಪಟ್ಟಣದ ಗಂಜಾಮ್ನಲ್ಲಿ ನಡೆದಿದೆ.
18 ವರ್ಷದ ಯುವತಿ ಆತ್ಮಹತ್ಯೆ ಮಾಡಿಕೊಂಡ ದುರ್ದೈವಿ. ಲಕ್ಷ್ಮಣ್ ಎಂಬ ಯುವಕನಿಂದ ಮೋಸ ಹೋದ ಯುವತಿ, ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎನ್ನಲಾಗಿದೆ. ಮೋಸ ಮಾಡಿದ ಯುವಕನ ವಿರುದ್ಧ ಪೋಷಕರು ದೂರು ನೀಡಿದ್ದು, ಶ್ರೀರಂಗಪಟ್ಟಣ ಟೌನ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.