ಕಾನ್ಪುರ (ಉತ್ತರ ಪ್ರದೇಶ): ಮಾವಿನ ಮರಕ್ಕೆ ನೇಣು ಬಿಗಿದುಕೊಂಡು ಪ್ರೇಮಿಗಳು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಉತ್ತರ ಪ್ರದೇಶದ ಕಾನ್ಪುರದ ಅಲೌಲಾಪುರ ಎಂಬ ಗ್ರಾಮದಲ್ಲಿ ನಡೆದಿದೆ.
ಮೃತರನ್ನು ವಿಕಾಸ್ ಸಿಂಗ್ (22) ಹಾಗೂ ಆರತಿ (19) ಎಂದು ಗುರುತಿಸಲಾಗಿದೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಡೆತ್ನೋಟ್ ಕೂಡ ಸಿಕ್ಕಿಲ್ಲ. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿರುವುದಾಗಿ ಪೊಲೀಸ್ ವರಿಷ್ಠಾಧಿಕಾರಿ ಬ್ರಜೇಶ್ ಶ್ರೀವಾತ್ಸವ ಹೇಳಿದ್ದಾರೆ.
ಇದನ್ನೂ ಓದಿ- ಕೋಲ್ಕತಾ : ಬಿಜೆಪಿ ಮುಖಂಡನ ಕಾರಿನ ಮೇಲೆ ಗುಂಡಿನ ದಾಳಿ
ಇವರಿಬ್ಬರು ಕಳೆದ ಕೆಲ ವರ್ಷಗಳಿಂದ ಪ್ರೀತಿಸುತ್ತಿದ್ದು, ಇದಕ್ಕೆ ಪೋಷಕರ ವಿರೋಧವಿತ್ತು ಎಂಬುದು ಪ್ರಾಥಮಿಕ ತನಿಖೆಯಿಂದ ತಿಳಿದು ಬಂದಿರುವುದಾಗಿ ಎಸ್ಪಿ ತಿಳಿಸಿದ್ದಾರೆ.