ETV Bharat / jagte-raho

ಪತ್ರಕರ್ತನ ಹತ್ಯೆ ಪ್ರಕರಣದ ಪ್ರಮುಖ ಆರೋಪಿಗಳು ಅರೆಸ್ಟ್​ - ಫೆಫ್ನಾ

ಉತ್ತರ ಪ್ರದೇಶದ ಪತ್ರಕರ್ತನ ಹತ್ಯೆ ಪ್ರಕರಣ ಸಂಬಂಧ ಇಬ್ಬರು ಪ್ರಮುಖ ಆರೋಪಿಗಳನ್ನು ಬಂಧಿಸಲಾಗಿದ್ದು, ಈವರೆಗೆ ಒಟ್ಟು 8 ಆರೋಪಿಗಳನ್ನು ಅರೆಸ್ಟ್ ಮಾಡಿರುವುದಾಗಿ ಪೊಲೀಸರು ತಿಳಿಸಿದ್ದಾರೆ.

journalist Ratan Singh
ಪತ್ರಕರ್ತ ರತನ್​ ಸಿಂಗ್
author img

By

Published : Aug 28, 2020, 4:06 PM IST

ಬಲ್ಲಿಯಾ (ಉತ್ತರ ಪ್ರದೇಶ): ಪತ್ರಕರ್ತ ರತನ್​ ಸಿಂಗ್​ರ ಹತ್ಯೆ ಸಂಬಂಧ ಇಬ್ಬರು ಪ್ರಮುಖ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

ಬಂಧಿತ ಇಬ್ಬರು ಆರೋಪಿಗಳಲ್ಲಿ ಒಬ್ಬನನ್ನು ಹಿರಾ ಸಿಂಗ್​ ಎಂದು ಗುರುತಿಸಲಾಗಿದೆ. ಪ್ರಕರಣ ಸಂಬಂಧ ಈವರೆಗೆ ಒಟ್ಟು 8 ಆರೋಪಿಗಳನ್ನು ಅರೆಸ್ಟ್ ಮಾಡಿರುವುದಾಗಿ ಪೊಲೀಸರು ತಿಳಿಸಿದ್ದಾರೆ.

ನಾಲ್ಕು ಪೊಲೀಸ್​ ತಂಡಗಳು ಕೃತ್ಯದಲ್ಲಿ ಭಾಗಿಯಾದ ಆರೋಪಿಗಳನ್ನು ಸೆರೆ ಹಿಡಿಯಲು ಕಾರ್ಯಾಚರಣೆ ಕೈಗೊಂಡಿದ್ದು, ಉತ್ತರ ಪ್ರದೇಶ ಮತ್ತು ಬಿಹಾರ್​ ರಾಜ್ಯಗಳ ಹಲವು ಭಾಗಗಳಲ್ಲಿ ದಾಳಿ ನಡೆಸಿವೆ. ಘಟನೆ ಸಂಬಂಧ ಪೊಲೀಸ್ ಅಧಿಕಾರಿಯೊಬ್ಬರನ್ನು ಅಮಾನತು ಮಾಡಲಾಗಿದೆ. ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಮೃತ ಪತ್ರಕರ್ತನ ಕುಟುಂಬಕ್ಕೆ 10 ಲಕ್ಷ ರೂ. ಪರಿಹಾರ ಘೋಷಿಸಿದ್ದಾರೆ.

ಆಗಸ್ಟ್​ 24ರ ರಾತ್ರಿ ಉತ್ತರ ಪ್ರದೇಶದ ಬಲ್ಲಿಯಾ ಜಿಲ್ಲೆಯ ಫೆಫ್ನಾ ಎಂಬಲ್ಲಿ ಪತ್ರಕರ್ತ ರತನ್​ ಸಿಂಗ್​ರನ್ನು ಗುಂಡಿಕ್ಕಿ ಕೊಂದು ದುಷ್ಕರ್ಮಿಗಳು ಪರಾರಿಯಾಗಿದ್ದರು. ಘಟನೆಗೆ ಹಳೇ ದ್ವೇಷವೇ ಕಾರಣ ಎಂದು ಹೇಳಲಾಗಿದ್ದು, ತನಿಖೆ ಮುಂದುವರೆದಿದೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.