ಬಿಜ್ನೋರ್ (ಉತ್ತರ ಪ್ರದೇಶ): ಪ್ರಿಯತಮೆಯನ್ನೇ ಕತ್ತು ಹಿಸುಕಿ ಕೊಲೆ ಮಾಡಿ ಮೃತದೇಹವನ್ನು ಕಾಡಿನಲ್ಲಿ ಎಸೆದುಹೋದ ಯುವಕನ್ನು ಉತ್ತರ ಪ್ರದೇಶ ಪೊಲೀಸರು ಬಂಧಿಸಿದ್ದಾರೆ.
ಉತ್ತರ ಪ್ರದೇಶದ ಬಿಜ್ನೋರ್ ಜಿಲ್ಲೆಯ ತಹ್ರಿರ್ ಗ್ರಾಮದ ಯುವತಿ ಆಗಸ್ಟ್ 31 ರಿಂದ ನಾಪತ್ತೆಯಾಗಿದ್ದಳು. ಈ ಸಂಬಂಧ ಯುವತಿಯ ಪೋಷಕರು ಪೊಲೀಸರಿಗೆ ದೂರು ನೀಡಿದ್ದರು. ಪ್ರಕರಣ ದಾಖಲಿಸಿಕೊಂಡ ಪೊಲೀಸರು ತನಿಖೆ ಕೈಗೊಂಡಿದ್ದರು. ಇದೀಗ ಗ್ರಾಮದ ಅರಣ್ಯ ಪ್ರದೇಶದಲ್ಲಿ ಯುವತಿ ಶವವಾಗಿ ಪತ್ತೆಯಾಗಿದ್ದಾಳೆ.
ಪ್ರಕರಣದ ಜಾಡು ಹಿಡಿದು ಹೊರಟ ಪೊಲೀಸರಿಗೆ ಆರೋಪಿ ಬೇರಾರು ಅಲ್ಲ, ಯುವತಿಯ ಪ್ರಿಯತಮ ಎಂಬುದು ತಿಳಿದು ಬಂದಿದ್ದು, ಆತನನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಸಲೀಂ ಬಂಧಿತ ಆರೋಪಿ.
ಆಕೆ ಬೇರೊಬ್ಬ ಯುವಕನ ಜೊತೆ ಫೋನ್ನಲ್ಲಿ ಹೆಚ್ಚು ಮಾತನಾಡುತ್ತಾಳೆ ಎಂಬ ಕಾರಣಕ್ಕೆ ಕೃತ್ಯ ಎಸಗಿರುವುದಾಗಿ ವಿಚಾರಣೆ ವೇಳೆ ಸಲೀಂ ಹೇಳಿದ್ದಾನೆ. ಸದ್ಯ ಪೊಲೀಸರು ತನಿಖೆ ಮುಂದುವರೆಸಿದ್ದಾರೆ.