ಕಲಬುರಗಿ: ಭಾಗಶಃ ಸುಟ್ಟ ಸ್ಥಿತಿಯಲ್ಲಿ ವ್ಯಕ್ತಿಯೋರ್ವನ ಮೃತದೇಹ ನಗರದ ಕೋರಂಟಿ ಹನುಮಾನ್ ದೇವಸ್ಥಾನದ ಬಳಿ ಪತ್ತೆಯಾಗಿದೆ.
ರಾಮನಗರ ನಿವಾಸಿ ಸಂತೋಷ್(30) ಮೃತರು. ಮುಂಬೈನಲ್ಲಿ ಕೆಲಸ ಮಾಡುತ್ತಿದ್ದ ಈತ ಲಾಕ್ಡೌನ್ ಸಂದರ್ಭದಲ್ಲಿ ಊರಿಗೆ ಬಂದಿದ್ದನಂತೆ. ಬಳಿಕ ಸೆಂಟ್ರಿಂಗ್ ಕೆಲಸ ಮಾಡುತ್ತಿದ್ದ ಎಂದು ತಿಳಿದುಬಂದಿದೆ. ಪ್ರಕರಣದ ಬಗ್ಗೆ ಮತ್ತಷ್ಟು ವಿವರಗಳು ಇನ್ನಷ್ಟೇ ತಿಳಿಯಬೇಕಿದೆ.
ಇದನ್ನು ಓದಿ: ಆನೆಗುಂಡಿ ಬಳಿ ಕಾಲುವೆಯಲ್ಲಿ ಬಿದ್ದು ಹೆಣ್ಣಾನೆ ಅನುಮಾನಾಸ್ಪದ ಸಾವು
ಸದ್ಯ ಘಟನೆ ಸಂಬಂಧ ಸ್ಟೇಷನ್ ಬಜಾರ್ ಪೊಲೀಸ್ ಠಾಣೆಯಲ್ಲಿ ಕೇಸು ದಾಖಲಾಗಿದೆ.