ವಿಜಯವಾಡ: ತನ್ನ ಪ್ರೇಮ ನಿವೇದನೆ ಒಪ್ಪಿಕೊಳ್ಳದ ಕಾರಣ ಇಂಜಿನಿಯರಿಂಗ್ ವಿದ್ಯಾರ್ಥಿನಿಯನ್ನು ಚಾಕುವಿನಿಂದ ಇರಿದು ಕೊಲೆ ಮಾಡಿರುವ ಘಟನೆ ಆಂಧ್ರಪ್ರದೇಶದ ವಿಜಯವಾಡದಲ್ಲಿ ನಡೆದಿದೆ.
ಸ್ವಾಮಿ ಎಂಬಾತ ಇಂಜಿನಿಯರಿಂಗ್ ವ್ಯಾಸಂಗ ಮಾಡುತ್ತಿದ್ದ ವಿಜಯವಾಡದ ಕ್ರೈಸ್ಟ್ ರಾಜಪುರಂನ ಯುವತಿ ಹಿಂದೆ ಬಿದ್ದಿದ್ದ ಈತ ತನ್ನನ್ನು ಪ್ರೀತಿಸುವಂತೆ ಒತ್ತಾಯಿಸುತ್ತಿದ್ದನು. ಆದರೆ ಆಕೆ ಇದಕ್ಕೆ ನಿರಾಕರಿಸಿದ್ದಳು. ಇದರಿಂದ ಕೋಪಗೊಂಡ ಸ್ವಾಮಿ, ಯುವತಿಯ ಮನೆಗೆ ನುಗ್ಗಿ ಆಕೆಗೆ ಚೂರಿಯಿಂದ ಇರಿದು ಹಲ್ಲೆ ಮಾಡಿದ್ದಾನೆ. ಅಲ್ಲದೇ ಬಳಿಕ ತಾನೂ ಚಾಕುವಿನಿಂದ ಚುಚ್ಚಿಕೊಂಡಿದ್ದಾನೆ.
ಗಂಭೀರವಾಗಿ ಗಾಯಗೊಂಡಿದ್ದ ಇಬ್ಬರನ್ನೂ ಆಸ್ಪತ್ರೆಗೆ ಕರೆದೊಯ್ಯಲಾಗಿದ್ದು, ಮಾರ್ಗಮಧ್ಯೆ ಯುವತಿ ಪ್ರಾಣಬಿಟ್ಟಿದ್ದಾಳೆ. ಇನ್ನು ಆರೋಪಿ ಸ್ವಾಮಿ ಪರಿಸ್ಥಿತಿ ಗಂಭೀರವಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿರುವ ವಿಜಯವಾಡ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.