ETV Bharat / jagte-raho

132 ಕೆ.ಜಿ. ಗಾಂಜಾ ಸಹಿತ ಇಬ್ಬರು ಆರೋಪಿಗಳನ್ನು ಬಂಧಿಸಿದ ಸಿಸಿಬಿ ಪೊಲೀಸರು

132 ಕೆ.ಜಿ. ಗಾಂಜಾ ಸಾಗಾಟ ಮಾಡುತ್ತಿದ್ದ ಆರೋಪಿಗಳನ್ನು ಸಿಸಿಬಿ ಪೊಲೀಸರು ಬಂಧಿಸಿದ ಘಟನೆ ನಗರದ ಪಂಪ್​​ವೆಲ್​ ಬಳಿಯ ತಾರೆತೋಟ ಎಂಬಲ್ಲಿ ಜರುಗಿದೆ. ಸುಮಾರು 43 ಲಕ್ಷ ರೂ. ಮೌಲ್ಯದ ಗಾಂಜಾ ಹಾಗೂ ಬೆಂಗಾವಲು ಕಾರು, ಎರಡು ಮೊಬೈಲ್​ ಪೊಲೀಸರು ವಶಕ್ಕೆ ಪಡೆದಿದ್ದಾರೆ.

Mangalore CCB police arrested two accused with 132 kg marijuana
ಅಕ್ರಮ ಗಾಂಜಾ ಸಾಗಾಟ
author img

By

Published : Aug 29, 2020, 9:25 PM IST

ಮಂಗಳೂರು: ಪಿಕಪ್ ವಾಹನದಲ್ಲಿ 132 ಕೆ.ಜಿ. ಗಾಂಜಾ ಸಾಗಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳು ಹಾಗೂ ಬೆಂಗಾವಲು ಕಾರನ್ನು ಸಿಸಿಬಿ ಪೊಲೀಸರು ವಶಪಡಿಸಿಕೊಂಡಿರುವ ಘಟನೆ ನಗರದ ಪಂಪ್ ವೆಲ್ ಬಳಿಯ ತಾರೆತೋಟ ಎಂಬಲ್ಲಿ ನಡೆದಿದೆ.

ಕೇರಳದ ಕಾಸರಗೋಡು ಜಿಲ್ಲೆಯ ಮಂಗಲ್ಪಾಡಿ ಗ್ರಾಮದ ಉಪ್ಪಳ ನಿವಾಸಿ ಕಲಂದರ್ ಮಹಮ್ಮದ್ ಶಾ (35) ಹಾಗೂ ಕುಂಜತ್ತೂರು ಗ್ರಾಮ ಉದ್ಯಾವರ ನಿವಾಸಿ ಮೊಯ್ದೀನ್ ಅನ್ಸಾರ್ (27) ಬಂಧಿತ ಆರೋಪಿಗಳು.

ಆರೋಪಿಗಳು ಮಂಗಳೂರು ಹಾಗೂ ಕಾಸರಗೋಡು ಜಿಲ್ಲೆಗಳಿಗೆ ಬೃಹತ್ ಪ್ರಮಾಣದಲ್ಲಿ ಗಾಂಜಾ ಸಾಗಾಟ ಮಾಡುತ್ತಿದ್ದರು. ಇದನ್ನು ಪತ್ತೆ ಹಚ್ಚಿರುವ ಸಿಸಿಬಿ ಘಟಕದ ಪೊಲೀಸರು 132 ಕೆ.ಜಿ. ಗಾಂಜಾ ತುಂಬಿದ ಗೋಣಿ ಚೀಲ ಸಹಿತ ಸಾಗಾಟಕ್ಕೆ ಬಳಸಿದ ಎರಡು ವಾಹನ, ಎರಡು ಮೊಬೈಲ್ ವಶಪಡಿಸಿಕೊಂಡಿದ್ದಾರೆ.

ಸ್ವಾಧೀನ ಪಡಿಸಿಕೊಂಡಿರುವ ಸ್ವತ್ತಿ ಒಟ್ಟು ಮೌಲ್ಯ 43 ಲಕ್ಷ ರೂ. ಎಂದು ಅಂದಾಜಿಸಲಾಗಿದೆ. ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.