ETV Bharat / jagte-raho

ಕಬ್ಬಿನ ಗದ್ದೆಗೆ ಹೊತ್ತೊಯ್ದು ಯುವತಿ ಮೇಲೆ ಅತ್ಯಾಚಾರ - ಉತ್ತರ ಪ್ರದೇಶ ಅತ್ಯಾಚಾರ ಪ್ರಕರಣ

ಕಟ್ಟಿಗೆ ತರೆಲೆಂದು ತನ್ನ ತಾಯಿಯೊಂದಿಗೆ ಅರಣ್ಯ ಪ್ರದೇಶಕ್ಕೆ ತೆರಳಿದ್ದ ಯುವತಿಯನ್ನು ಕಬ್ಬಿನ ಗದ್ದೆಗೆ ಹೊತ್ತೊಯ್ದು ಅತ್ಯಾಚಾರ ಎಸಗಿರುವ ಅಮಾನವೀಯ ಘಟನೆ ನಡೆದಿದ್ದು, ಇದೀಗ ಆರೋಪಿಗಾಗಿ ಪೊಲೀಸರು ಬಲೆ ಬೀಸಿದ್ದಾರೆ.

woman raped by man in UP's Muzaffarnagar
ಯುವತಿಯ ಅತ್ಯಾಚಾರ
author img

By

Published : Sep 5, 2020, 5:27 PM IST

ಮುಜಾಫರ್​ನಗರ(ಉತ್ತರ ಪ್ರದೇಶ): ಕಬ್ಬಿನ ಗದ್ದೆಗೆ ಹೊತ್ತೊಯ್ದು 20 ವರ್ಷದ ಯುವತಿಯ ಮೇಲೆ ಕಾಮುಕ ಅತ್ಯಾಚಾರ ನಡೆಸಿರುವ ಘಟನೆ ಉತ್ತರ ಪ್ರದೇಶದ ಮುಜಾಫರ್​ನಗರದಲ್ಲಿ ನಡೆದಿದೆ.

ಯುವತಿ ತನ್ನ ತಾಯಿಯೊಂದಿಗೆ ಕಟ್ಟಿಗೆ ತರೆಲೆಂದು ಅರಣ್ಯ ಪ್ರದೇಶಕ್ಕೆ ತೆರಳಿದ್ದ ವೇಳೆ ಬೈಕ್​ನಲ್ಲಿ ಬಂದ ಇಬ್ಬರು ವ್ಯಕ್ತಿಗಳು ಯುವತಿಯನ್ನು ಬಲವಂತವಾಗಿ ಎಳೆದೊಯ್ದಿದ್ದಾರೆ. ಕಬ್ಬಿನ ಗದ್ದೆಗೆ ಹೊತ್ತೊಯ್ದಿದ್ದು, ಸಲೀಂ ಎಂಬಾತ ಆಕೆಯ ಮೇಲೆ ಅತ್ಯಾಚಾರ ಎಸಗಿದ್ದಾನೆ.

ಸಂತ್ರಸ್ತೆಯ ತಾಯಿ ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಿಸಿಕೊಂಡ ಮುಜಾಫರ್​ನಗರ ಪೊಲೀಸರು ಆರೋಪಿಗಳಿಗಾಗಿ ಬಲೆ ಬೀಸಿದ್ದಾರೆ ಎಂದು ಎಸ್​ಹೆಚ್​ಒ ರಾಜ್ ​ಕುಮಾರ್​ ರಾಣಾ ಮಾಹಿತಿ ನೀಡಿದ್ದಾರೆ. ಕಳೆದ ಕೆಲ ದಿನಗಳಿಂದ ಉತ್ತರಪ್ರದೇಶದಲ್ಲಿ ಇಂತಹ ಅಮಾನವೀಯ ಘಟನೆ ನಡೆಯುತ್ತಿದ್ದು, ಕಳೆದೆರಡು ದಿನಗಳ ಹಿಂದೆ ಅಪ್ರಾಪ್ತೆ ಮೇಲೆ ದುಷ್ಕರ್ಮಿ ಅತ್ಯಾಚಾರವೆಸಗಿದ್ದನು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.