ಬರೇಲಿ (ಉತ್ತರ ಪ್ರದೇಶ): ಬಾಲಕಿಯನ್ನು ಅಪಹರಿಸಿ ನಾಲ್ವರು ಯುವಕರು ಅತ್ಯಾಚಾರ ಎಸಗಿರುವ ಘಟನೆ ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಸರ್ವೋದಯ ನಗರದಲ್ಲಿ ನಡೆದಿದೆ.
11ನೇ ತರಗತಿಯಲ್ಲಿ ಓದುತ್ತಿರುವ ಬಾಲಕಿ ಕಾಲೇಜಿಗೆ ಅರ್ಜಿ ಸಲ್ಲಿಸಲು ಫೋಟೋ ತೆಗೆಯಿಸಿಕೊಳ್ಳಲು ಸ್ಟುಡಿಯೋಗೆ ಹೋಗುತ್ತಿರುವ ವೇಳೆ ಯುವಕರು ಅಪಹರಿಸಿದ್ದಾರೆ. ನಿರ್ಜನ ಪ್ರದೇಶಕ್ಕೆ ಹೊತ್ತೊಯ್ದು ಅತ್ಯಾಚಾರ ನಡೆಸಿದ್ದಲ್ಲದೇ, ಆಕೆಗೆ ಕಬ್ಬಿಣದ ರಾಡ್‌ನಿಂದ ಹೊಡೆದು ಮೊಬೈಲ್ನಲ್ಲಿ ಕೃತ್ಯ ಸೆರೆ ಹಿಡಿದಿದ್ದಾರೆ.
ಘಟನೆ ಕುರಿತು ಬಾಲಕಿ ತನ್ನ ತಂದೆಗೆ ಹೇಳಿದ್ದು, ಅವರು ಪೊಲೀಸರಿಗೆ ದೂರು ನೀಡಿದ್ದಾರೆ. ಆರೋಪಿಗಳನ್ನು ತನ್ನ ನೆರೆಹೊರೆಯ ಯುವಕರೆಂದು ಬಾಲಕಿ ಗುರುತಿಸಿದ್ದು, ಐಪಿಸಿ ಸೆಕ್ಷನ್ ಹಾಗೂ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡ ಪೊಲೀಸರು ಇಬ್ಬರನ್ನು ಬಂಧಿಸಿದ್ದಾರೆ. ಮತ್ತಿಬ್ಬರು ಆರೋಪಿಗಳಿಗಾಗಿ ಬಲೆ ಬೀಸಿದ್ದು, ಸಂತ್ರಸ್ತೆಯನ್ನು ವೈದ್ಯಕೀಯ ಪರೀಕ್ಷೆಗೆ ಕಳುಹಿಸಿಲಾಗಿದೆ.