ಮೈಸೂರು : ಕ್ಷುಲ್ಲಕ ಕಾರಣಕ್ಕಾಗಿ ಗಲಾಟೆ ನಡೆದು ವ್ಯಕ್ತಿಯೊಬ್ಬನನ್ನು ಬರ್ಬರವಾಗಿ ಚಾಕುವಿನಿಂದ ಇರಿದು ಹತ್ಯೆ ಮಾಡಿರುವ ಘಟನೆ ನಂಜನಗೂಡು ತಾಲೂಕಿನ ಮಾಡ್ರಹಳ್ಳಿ ಗ್ರಾಮದಲ್ಲಿ ನಡೆದಿದೆ.
ಇದೇ ಊರಿನ ಮಹದೇವ (44) ಎಂಬಾತ ಮೃತ ವ್ಯಕ್ತಿ. ಕ್ಷುಲ್ಲಕ ಕಾರಣಕ್ಕಾಗಿ ಎರಡು ಗುಂಪುಗಳ ನಡುವೆ ಗಲಾಟೆ ನಡೆದಿದ್ದು, ಹಳೆ ದ್ವೇಷವಿತ್ತು ಎನ್ನಲಾಗಿದೆ.
ಗಲಾಟೆ ತಡೆಯಲು ಹೋದ ವ್ಯಕ್ತಿಗಳಿಗೂ ತೀವ್ರ ಗಾಯವಾಗಿದೆ. ಹತ್ಯೆಗೈದ ಆರೋಪಿಗಳಾದ ನಂಜುಂಡಸ್ವಾಮಿ, ಮಹದೇವಸ್ವಾಮಿ, ಶ್ರೀನಗರದ ಸೋಮಶೇಖರ್ ಪರಾರಿಯಾಗಿದ್ದಾರೆ. ಸ್ಥಳಕ್ಕೆ ನಂಜನಗೂಡು ಗ್ರಾಮಾಂತರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.