ETV Bharat / jagte-raho

ಮರ್ಮಾಂಗ ಜಜ್ಜಿ, ತಲೆ ಮೇಲೆ ಕಲ್ಲು ಎತ್ತಿ ಹಾಕಿ ಅಪರಿಚಿತ ಯುವಕನ ಬರ್ಬರ ಹತ್ಯೆ

author img

By

Published : Jan 13, 2021, 10:51 PM IST

ಓಕಳೀಪುರಂನ ರೈಲ್ವೆ ಪ್ಯಾರಲಲ್ ರಸ್ತೆಯ ಇಲಾಖೆಯ ಖಾಲಿ ಜಾಗದಲ್ಲಿ ಮಂಗಳವಾರ ಸಂಜೆ 6.30ಕ್ಕೆ ಯುವಕನ ಶವವನ್ನು ಕಂಡ ಸಾರ್ವಜನಿಕರು ಪೊಲೀಸರಿಗೆ ಮಾಹಿತಿ ನೀಡಿದ್ದರು. ಪೊಲೀಸರು ಸ್ಥಳಕ್ಕೆ ಬಂದು ಪರಿಶೀಲಿಸಿದಾಗ ದುಷ್ಕರ್ಮಿಗಳು ಆತನ ಮರ್ಮಾಂಗ ಜಜ್ಜಿ, ತಲೆ ಮೇಲೆ ಕಲ್ಲು ಎತ್ತಿ ಹಾಕಿ ಹತ್ಯೆಗೈದಿರುವುದು ಕಂಡು ಬಂದಿದೆ.

murder-of-an-unknown-young-man
ಅಪರಿಚಿತ ಯುವಕನ ಬರ್ಬರ ಹತ್ಯೆ

ಬೆಂಗಳೂರು: ಯುವಕನೊಬ್ಬನ ಮರ್ಮಾಂಗ ಮತ್ತು ತಲೆಯನ್ನು ಕಲ್ಲಿನಿಂದ ಜಜ್ಜಿ ಹತ್ಯೆ ಮಾಡಿ ದುಷ್ಕರ್ಮಿಗಳು ಪರಾರಿಯಾಗಿರುವ ಘಟನೆ ಶೇಷಾದ್ರಿಪುರ ಠಾಣಾ ವ್ಯಾಪ್ತಿಯ ರೈಲ್ವೆ ಸೇತುವೆ ಬಳಿ ನಡೆದಿದೆ.

ಓದಿ: ರಾಜ್ಯದಲ್ಲಿಂದು 746 ಮಂದಿಗೆ ಕೊರೊನಾ: ಮೂವರು ಸೋಂಕಿತರು ಬಲಿ‌

ಕೊಲೆಯಾದ ಯುವಕನ ಗುರುತು ಪತ್ತೆಯಾಗಿಲ್ಲ. ಮೇಲ್ನೋಟಕ್ಕೆ 20ರಿಂದ 25 ವರ್ಷದೊಳಗಿನ ಯುವಕ ಎಂದು ಪೊಲೀಸರು ತಿಳಿಸಿದ್ದಾರೆ. ಅಪರಿಚಿತ ಶವದ ವಾರಿಸುದಾರರಿಗಾಗಿ ಪೊಲೀಸರು ಹುಡುಕಾಡುತ್ತಿದ್ದಾರೆ. ಓಕಳೀಪುರಂನ ರೈಲ್ವೆ ಪ್ಯಾರಲಲ್ ರಸ್ತೆಯ ಇಲಾಖೆಯ ಖಾಲಿ ಜಾಗದಲ್ಲಿ ಮಂಗಳವಾರ ಸಂಜೆ 6.30ಕ್ಕೆ ಯುವಕನ ಶವವನ್ನು ಕಂಡ ಸಾರ್ವಜನಿಕರು ಪೊಲೀಸರಿಗೆ ಮಾಹಿತಿ ನೀಡಿದ್ದರು.

ಪೊಲೀಸರು ಸ್ಥಳಕ್ಕೆ ಬಂದು ಪರಿಶೀಲಿಸಿದಾಗ ದುಷ್ಕರ್ಮಿಗಳು ಆತನ ಮರ್ಮಾಂಗ ಜಜ್ಜಿ, ತಲೆ ಮೇಲೆ ಕಲ್ಲು ಎತ್ತಿ ಹಾಕಿ ಹತ್ಯೆಗೈದಿರುವುದು ಕಂಡು ಬಂದಿದೆ. ಜತೆಗೆ ತಲೆಗೆ ಮಾರಕಾಸ್ತ್ರಗಳಿಂದ ಭೀಕರವಾಗಿ ಹಲ್ಲೆ ನಡೆಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಬೌರಿಂಗ್ ಆಸ್ಪತ್ರೆಗೆ ರವಾನಿಸಲಾಗಿದ್ದು, ಸ್ಥಳೀಯ ಸಿಸಿಟಿವಿ ಕ್ಯಾಮರಾ ಪರಿಶೀಲಿಸಿ ಆರೋಪಿಗಳಿಗಾಗಿ ಶೋಧ ಕಾರ್ಯ ನಡೆಯುತ್ತಿದ್ದು, ಶೇಷಾದ್ರಿಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.