ಬಿಜಾಪುರ್ (ಛತ್ತೀಸ್ಗಢ): ಎರಡು ಕೊಲೆ ಪ್ರಕರಣದ ಆರೋಪ ಹೊತ್ತಿದ್ದ ಮೋಸ್ಟ್ ವಾಂಟೆಡ್ ನಕ್ಸಲ್ನನ್ನು ಛತ್ತೀಸ್ಗಢದಲ್ಲಿ ಭದ್ರತಾ ಪಡೆ ಹೊಡೆದುರುಳಿಸಿದೆ.
ಸಂತೋಷ್ ಪೋದಿಯಾಮ್ ಮೃತ ನಕ್ಸಲ್ ಆಗಿದ್ದು, ಈತ ಕೆಲ ತಿಂಗಳ ಹಿಂದೆ ಪೊಲೀಸ್ ಅಧಿಕಾರಿ ಹಾಗೂ ಅರಣ್ಯಾಧಿಕಾರಿ ಅಪಹರಿಸಿ ಕೊಲೆಗೈದಿದ್ದ. ಈತನ ಸುಳಿವು ನೀಡಿದವರಿಗೆ ಒಂದು ಲಕ್ಷ ರೂ. ಬಹುಮಾನ ನೀಡುವುದಾಗಿ ಪೊಲೀಸರು ಘೋಷಿಸಿದ್ದರು.
ಇಂದು ಬೆಳಗ್ಗೆ ಛತ್ತೀಸ್ಗಢದ ಬಿಜಾಪುರ್ ಜಿಲ್ಲೆಯ ದರ್ಬಾ ಅರಣ್ಯ ಪ್ರದೇಶದಲ್ಲಿ ನಡೆದ ಎನ್ಕೌಂಟರ್ನಲ್ಲಿ ಭದ್ರತಾ ಸಿಬ್ಬಂದಿ ಸಂತೋಷ್ ಪೋದಿಯಾಮ್ನ ಹತ್ಯೆ ಮಾಡಲಾಗಿದೆ ಎಂದು ಬಸ್ತರ್ ಶ್ರೇಣಿಯ ಪೊಲೀಸ್ ಇನ್ಸ್‌ಪೆಕ್ಟರ್ ಜನರಲ್ (ಐಜಿ) ಸುಂದರರಾಜ್ ಪಿ ತಿಳಿಸಿದ್ದಾರೆ.