ಪ್ರಯಾಗರಾಜ್: ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ವಿರುದ್ಧ ಆಕ್ಷೇಪಾರ್ಹ ಪೋಸ್ಟ್ ಮಾಡಿದ್ದ ಆರೋಪಿಗೆ ವಿಶಿಷ್ಟ ಷರತ್ತುಗಳೊಂದಿಗೆ ಅಲಹಾಬಾದ್ ಹೈಕೋರ್ಟ್ ಜಾಮೀನು ನೀಡಿದೆ.
ಆರೋಪಿ ಅಖಿಲಾನಂದ ರಾವ್ ಸಲ್ಲಿಸಿದ್ದ ಜಾಮೀನು ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಸಿದ್ಧಾರ್ಥ, ಎರಡು ವರ್ಷಗಳ ಕಾಲ ಸಾಮಾಜಿಕ ಜಾಲತಾಣ ಬಳಸುವಂತಿಲ್ಲ ಎಂದು ಆದೇಶಿಸಿ, ಷರತ್ತುಬದ್ಧ ಜಾಮೀನು ನೀಡಿದ್ದಾರೆ.
ಸೋಷಿಯಲ್ ಮೀಡಿಯಾದಲ್ಲಿ ವ್ಯಕ್ತಿಗಳ ಬಗ್ಗೆ, ಕೆಲವು ಸ್ಥಳೀಯ ಪೊಲೀಸ್ ಅಧಿಕಾರಿಗಳ ವಿರುದ್ಧ ಅವಹೇಳನಕಾರಿ ಪೋಸ್ಟ್ ಮಾಡುತ್ತಿದ್ದ ಅಖಿಲಾನಂದ ರಾವ್, ಸಿಎಂ ಯೋಗಿ ವಿರುದ್ಧ ಕೂಡ ಆಕ್ಷೇಪಾರ್ಹ ಪೋಸ್ಟ್ ಮಾಡಿದ್ದನು. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿದ್ದ ಕೊಟ್ವಾಲಿ ಪೊಲೀಸರು ಈತನನ್ನು ಬಂಧಿಸಿದ್ದರು.
ವಿವಿಧ ಪೊಲೀಸ್ ಠಾಣೆಗಳಲ್ಲಿ ಆರೋಪಿ ಅಖಿಲಾನಂದ ರಾವ್ ವಿರುದ್ಧ 11 ಕ್ರಿಮಿನಲ್ ಕೇಸ್ಗಳು ದಾಖಲಾಗಿದ್ದು, ಮೇ 12 ರಿಂದ ಈತ ಜೈಲಿನಲ್ಲಿದ್ದನು.