ಕಲಬುರಗಿ: ಕಾರು ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಓರ್ವ ಸ್ಥಳದಲ್ಲೆ ಸಾವನ್ನಪ್ಪಿದ್ದು, ನಾಲ್ವರು ಗಂಭೀರ ಗಾಯಗೊಂಡ ಘಟನೆ ಜಿಲ್ಲೆಯ ಅಫಜಲಪುರ ತಾಲೂಕಿನ ಅತನೂರು-ಮಲ್ಲಾಬಾದ್ ಗ್ರಾಮಗಳ ಬಳಿ ನಡೆದಿದೆ.
ಚಿಂಚೋಳಿ ನಿವಾಸಿ ಮಹಾಂತಯ್ಯ ಮಠಪತಿ (22) ಮೃತ ದುರ್ದೈವಿ. ಅಫಜಲಪುರದಿಂದ ಕಲಬುರಗಿಗೆ ಹೋಗುವ ವೇಳೆ ಘಟನೆ ಸಂಭವಿಸಿದೆ. ಕುಡಿದ ಮತ್ತಿನಲ್ಲಿ ವಾಹನ ಚಲಾಯಿಸುತ್ತಿದ್ದದ್ದು ಅಪಘಾತಕ್ಕೆ ಕಾರಣವಾಗಿದೆ ಎನ್ನಲಾಗಿದೆ.
ಘಟನೆಯಲ್ಲಿ ನಾಲ್ವರಿಗೆ ಗಂಭೀರ ಗಾಯಗಳಾಗಿದ್ದು, ಗಾಯಾಳುಗಳನ್ನು ಜಿಲ್ಲಾ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಈ ಕುರಿತು ರೇವೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.