ಅರಕಲಗೂಡು: ಹಾಲಿನ ವಾಹನ ಮತ್ತು ಬೈಕ್ ನಡುವೆ ಡಿಕ್ಕಿ ಸಂಭವಿಸಿ ಓರ್ವ ಸಾವನ್ನಪ್ಪಿರುವ ಘಟನೆ ತಾಲೂಕಿನ ತಟ್ಟವಾಳು ಕೂನನಕೊಪ್ಪಲು ಮಧ್ಯದ ಬೆಳವಾಡಿ ರಸ್ತೆಯಲ್ಲಿ ನಡೆದಿದೆ.
ಮರವಳಲು ಗ್ರಾಮದ ಹರೀಶ್ (23) ಸ್ಥಳದಲ್ಲೇ ಸಾವನ್ನಪ್ಪಿದ ವ್ಯಕ್ತಿ. ಮತ್ತೊಬ್ಬ ಸವಾರ ಗರುಡನಹಳ್ಳಿ ನಟೇಶ್ ತೀವ್ರ ಗಾಯಗೊಂಡಿದ್ದು, ಹಾಸನ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.
ಈ ಕುರಿತು ಕೊಣನೂರು ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.