ಬೆಂಗಳೂರು: ಚನ್ನಮನಕೆರೆ ಅಚ್ಚುಕಟ್ಟು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿರುವ ನ್ಯೂ ಪ್ರಶಾಂತ್ ನಾನ್ ವೆಜ್ ಹೊಟೇಲ್ನಲ್ಲಿ ಭಾರತ- ಆಸ್ಟ್ರೇಲಿಯಾ ಟೆಸ್ಟ್ ಕ್ರಿಕೆಟ್ ಪಂದ್ಯಾವಳಿಯ ವೇಳೆ ಮೊಬೈಲ್ ಮೂಲಕ ಬೆಟ್ಟಿಂಗ್ ನೆಡೆಸುತ್ತಿದ್ದ ಓರ್ವನನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.
ಓದಿ: ನಾಪತ್ತೆಯಾಗಿದ್ದ ವ್ಯಕ್ತಿ ಶವವಾಗಿ ಪತ್ತೆ: ಆನೆ ದಾಳಿಯಿಂದ ಮೃತಪಟ್ಟಿರುವ ಶಂಕೆ
ಆರೋಪಿ ಶಶಿಕುಮಾರ್ ಅಲಿಯಾಸ್ ತಿಮ್ಮೇಗೌಡ (25 ವರ್ಷ) ರಾಮನಗರ ಜಿಲ್ಲೆಯ ದುನ್ನಸಂದ್ರ ಗ್ರಾಮದವನೆಂದು ತಿಳಿದು ಬಂದಿದೆ. ಬೆಟ್ಟಿಂಗ್ಗೆ ಸಂಬಂಧಿಸಿದ 2,50,000 ಲಕ್ಷ ರೂ. ಹಾಗೂ ಮೊಬೈಲ್ ಫೋನ್ ಪೊಲೀಸರು ವಶಕ್ಕೆ ಪಡೆದಿದ್ದಾರೆ.