ರಾಯಚೂರು : ಹಳೆ ದ್ವೇಷದ ಹಿನ್ನೆಲೆ ಲಿಂಗಸುಗೂರು ತಾಲೂಕಿನ ಪೈದೊಡ್ಡಿ ಗ್ರಾಮ ಪಂಚಾಯಿತಿ ಮಾಜಿ ಸದಸ್ಯನನ್ನು ಭೀಕರವಾಗಿ ಹತ್ಯೆಗೈಯಲಾಗಿದೆ.
ಹನುಮಂತಪ್ಪ ಯರಜಂತಿ (38) ಮೃತ ಗ್ರಾ.ಪಂ ಸದಸ್ಯ. ಬೈಕ್ ಮೇಲೆ ಬಂದ ಮೂವರು ದುಷ್ಕರ್ಮಿಗಳು ಗೌಡೂರು ಕ್ರಾಸ್ ಬಳಿ ಕೊಲೆ ಮಾಡಿ ಪರಾರಿಯಾಗಿದ್ದಾರೆ.
ಹಟ್ಟಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ. ಘಟನಾ ಸ್ಥಳಕ್ಕೆ ಡಿವೈಎಸ್ಪಿ ಎಸ್.ಎಸ್ ಹುಲ್ಲೂರು, ಸಿಪಿಐ ಯಸವಂತ ಬಿಸನಳ್ಳಿ ಭೇಟಿ ನೀಡಿ ಪರಿಶೀಲನೆ ನಡೆಸಿದರು.