ರಾಯಚೂರು: ರಸ್ತೆಯಲ್ಲಿ ಚಲಿಸುತ್ತಿದ್ದ ಬೈಕ್ ಮೇಲೆ ಏಕಾಏಕಿ ವಿದ್ಯುತ್ ಕಂಬ ಬಿದ್ದಿದ್ದು, ಸವಾರಗಾಯಗೊಂಡು ಬೈಕ್ ಸಂಪೂರ್ಣವಾಗಿ ಜಖಂಗೊಂಡಿರುವ ಘಟನೆ ಜಿಲ್ಲೆಯ ಮುದಗಲ್ ಪಟ್ಟಣದಲ್ಲಿನಡೆದಿದೆ.
ಲಿಂಗಸೂಗೂರು ತಾಲೂಕಿನ ಮುದಗಲ್ ಪಟ್ಟಣದ ಹಳೆಪೇಟೆಯಲ್ಲಿ ಈ ದುರ್ಘಟನೆ ನಡೆದಿದ್ದು, ಅಬ್ದುಲ್ ಗಾಯಗೊಂಡ ಬೈಕ್ ಸವಾರನೆಂದು ಗುರುತಿಸಲಾಗಿದೆ. ಅಬ್ದುಲ್ ಹಾಗೂ ಆತನ ಸ್ನೇಹಿತನ ಜೊತೆ ತೆರಳುತ್ತಿದ್ದಾಗ ರಸ್ತೆ ಪಕ್ಕದಲ್ಲಿದ ವಿದ್ಯುತ್ ಕಂಬ ಬೈಕ್ ಮೇಲೆ ಬಿದ್ದು, ಬೈಕ್ ಸವಾರ ಗಾಯಗೊಂಡು ಬೈಕ್ ಜಖಂಗೊಂಡಿದೆ. ವಿದ್ಯುತ್ ಕಂಬದ ಪಕ್ಕದಲ್ಲಿ ಚರಂಡಿ ನೀರು ಹರಿದು ಹೋಗಿರುವುದರಿಂದ ಪಕ್ಕದಲ್ಲಿನ ಮಣ್ಣು ಕುಸಿತದಿಂದ ಘಟನೆ ಸಂಭವಿಸಿದೆ ಎಂದು ಹೇಳಲಾಗುತ್ತಿದೆ. ಆದರೆ ಜೆಸ್ಕಾಂ ಅಧಿಕಾರಿಗಳ ನಿರ್ಲಕ್ಷ್ಯವೇ ಘಟನೆಗೆ ಮೂಲ ಕಾರಣವೆಂದು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.