ETV Bharat / jagte-raho

ವಿಷ ಸೇವಿಸಿ ಅತ್ಯಾಚಾರಕ್ಕೊಳಗಾದ ಬಾಲಕಿ ಸಾವು: ಅಪ್ರಾಪ್ತನ ವಶಕ್ಕೆ ಪಡೆದ ಪೊಲೀಸ್​

ರಾಜಸ್ಥಾನದ ಬನ್ಸ್ವಾರದಲ್ಲಿ ಅತ್ಯಾಚಾರಕ್ಕೊಳಗಾಗಿದ್ದ ಬಾಲಕಿ ವಿಷ ಸೇವಿಸಿ ಮೃತಪಟ್ಟ ಪ್ರಕರಣ ಸಂಬಂಧ ಸಂತ್ರಸ್ತೆಯ ತಾಯಿ ನೀಡಿರುವ ಹೇಳಿಕೆ ಮೇರೆಗೆ ಬಾಲಕನೊಬ್ಬನನ್ನ ಪೊಲೀಸರು ವಶಕ್ಕೆ ಪಡೆದಿದ್ದಾರೆ.

Rajasthan rape incident
ಅತ್ಯಾಚಾರ
author img

By

Published : Oct 2, 2020, 5:43 PM IST

ಬನ್ಸ್ವಾರ (ರಾಜಸ್ಥಾನ): ಅತ್ಯಾಚಾರಕ್ಕೊಳಗಾದ ಬಾಲಕಿ ವಿಷ ಸೇವಿಸಿ ಮೃತಪಟ್ಟ ಪ್ರಕರಣ ಸಂಬಂಧ ಅಪ್ರಾಪ್ತನನ್ನು ರಾಜಸ್ಥಾನ ಪೊಲೀಸರು ವಶಕ್ಕೆ ಪಡೆದಿದ್ದಾರೆ.

ರಾಜಸ್ಥಾನದ ಬನ್ಸ್ವಾರದಲ್ಲಿ ಅತ್ಯಾಚಾರಕ್ಕೊಳಗಾಗಿದ್ದ ಬಾಲಕಿಯನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ, ಆಕೆ ಬುಧವಾರ ಆತ್ಮಹತ್ಯೆ ಮಾಡಿಕೊಂಡಿದ್ದಳು. ಸಂತ್ರಸ್ತೆಯ ತಾಯಿ ನೀಡಿರುವ ಹೇಳಿಕೆ ಮೇರೆಗೆ ಅತ್ಯಾಚಾರ ಆರೋಪದಡಿ ಬಾಲಕನೊಬ್ಬನನ್ನು ವಶಕ್ಕೆ ಪಡೆಯಲಾಗಿದೆ ಎಂದು ಪೊಲೀಸ್​ ವರಿಷ್ಠಾಧಿಕಾರಿ ಕಿಶೋರ್​ ಕುಮಾರ್​ ಹೇಳಿದ್ದಾರೆ.

ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಬನ್ಸ್ವಾರ ಶಾಸಕ ಹರೇಂದ್ರ ನಿನಾಮಾ, ನನಗೆ ಸಿಕ್ಕಿರುವ ಮಾಹಿತಿ ಪ್ರಕಾರ ಹುಡುಗಿ ಹಾಗೂ ಹುಡುಗ ಇಬ್ಬರೂ ಪ್ರೀತಿಸುತ್ತಿದ್ದರು. ಬಾಲಕಿಯ ಪೋಷಕರು ಬೇರೊಬ್ಬನೊಂದಿಗೆ ಮದುವೆ ಮಾಡಲು ನಿರ್ಧರಿಸಿದ್ದರು. ಹೀಗಾಗಿ ಆಕೆ ಮನೆಬಿಟ್ಟು ಹೋಗಿ ಬಾಲಕನ ಮನೆಯಲ್ಲಿ ವಾಸವಿದ್ದಳು. ಇಲ್ಲಿ ಆಕೆ ವಿಷ ಸೇವಿಸಿದ್ದು, ಹುಡುಗನ ಕುಟುಂಬಸ್ಥರು ಆಸ್ಪತ್ರೆಗೆ ದಾಖಲಿಸಿದ್ದಾರೆ. ಈ ವೇಳೆ ಚಿಕಿತ್ಸೆ ಫಲಿಸದೆ ಆಕೆ ಸಾವನ್ನಪ್ಪಿದ್ದಾಳೆ ಎಂದು ತಿಳಿಸಿದ್ದಾರೆ.

ಈ ಸಂಬಂಧ ತನಿಖೆ ಚುರುಕುಗೊಳಿಸಿರುವ ಪೊಲೀಸರು ಮರಣೋತ್ತರ ಪರೀಕ್ಷೆಯ ವರದಿಗಾಗಿ ಕಾಯುತ್ತಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.