ETV Bharat / jagte-raho

ಅಪ್ರಾಪ್ತ ಮಗಳ ಮೇಲೆ ಅತ್ಯಾಚಾರ ಪ್ರಕರಣ: ತಂದೆಗೆ ಜೀವಾವಧಿ ಶಿಕ್ಷೆ - ಕಾನೂನು ಸೇವಾ ಪ್ರಾಧಿಕಾರದ ಮೂಲಕವೂ ಸರಕಾರದಿಂದ ಪರಿಹಾರ

ಅಪ್ರಾಪ್ತ ವಯಸ್ಸಿನ ಮಗಳ ಮೇಲೆ ಅತ್ಯಾಚಾರ ಎಸಗಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಅಪರಾಧಿ ತಂದೆಗೆ ಜೀವಾವಧಿ ಶಿಕ್ಷೆ ವಿಧಿಸಿ ಮಂಗಳೂರಿನ 2ನೇ ಹೆಚ್ಚುವರಿ ಸೆಷನ್ಸ್ ನ್ಯಾಯಾಲಯ ಹಾಗೂ ಪೋಕ್ಸೋ ವಿಶೇಷ ನ್ಯಾಯಾಲಯ ಆದೇಶಿಸಿದೆ.

kn_mng_01_judgement_photo_7202146.png
ಅಪ್ರಾಪ್ತ ಮಗಳ ಮೇಲೆ ಅತ್ಯಾಚಾರ ಪ್ರಕರಣ: ತಂದೆಗೆ ಜೀವಾವಧಿ ಶಿಕ್ಷೆ ಪ್ರಕಟ
author img

By

Published : Dec 17, 2019, 10:59 AM IST

ಮಂಗಳೂರು: ಅಪ್ರಾಪ್ತ ವಯಸ್ಸಿನ ಮಗಳ ಮೇಲೆ ಅತ್ಯಾಚಾರ ಎಸಗಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಅಪರಾಧಿ ತಂದೆಗೆ ಜೀವಾವಧಿ ಶಿಕ್ಷೆ ವಿಧಿಸಿ ಮಂಗಳೂರಿನ 2ನೇ ಹೆಚ್ಚುವರಿ ಸೆಷನ್ಸ್ ನ್ಯಾಯಾಲಯ ಹಾಗೂ ಪೋಕ್ಸೋ ವಿಶೇಷ ನ್ಯಾಯಾಲಯ ಆದೇಶಿಸಿದೆ.

ಉತ್ತರ ಭಾರತ ಮೂಲದ ಪ್ರಸ್ತುತ ದ.ಕ ಜಿಲ್ಲೆಯಲ್ಲಿ ನೆಲೆಸಿರುವ ಕಿಶೋರ್ (36) ಶಿಕ್ಷೆಗೊಳಗಾದ ಅಪರಾಧಿ. ಐಪಿಸಿ 376 (ಅತ್ಯಾಚಾರ) ಅನ್ವಯ ಜೀವಾವಧಿ ಶಿಕ್ಷೆ ಮತ್ತು 5,000 ರೂ. ದಂಡ ವಿಧಿಸಲಾಗಿದೆ. ದಂಡದ ಮೊತ್ತದಲ್ಲಿ 3,000 ರೂ.ಗಳನ್ನು ಸಂತ್ರಸ್ತ ಬಾಲಕಿಗೆ ಹಾಗೂ 2,000 ರೂ. ಸರ್ಕಾರಕ್ಕೆ ಪಾವತಿಸಬೇಕು. ಸಂತ್ರಸ್ತ ಬಾಲಕಿಯು ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಮೂಲಕವೂ ಸರ್ಕಾರದಿಂದ ಪರಿಹಾರ ಪಡೆಯಬಹುದು ಎಂದು ನ್ಯಾಯಾಧೀಶರು ತೀರ್ಪಿನಲ್ಲಿ ತಿಳಿಸಿದ್ದಾರೆ.

2016ರಲ್ಲಿ ಆರೋಪಿ ಕಿಶೋರ್ ತನ್ನ ಹೆಂಡತಿ ಹೆರಿಗೆಗೆಂದು ಅಸ್ಪತ್ರೆಯಲ್ಲಿ ದಾಖಲಾದ ಸಂದರ್ಭ 13 ವರ್ಷದ ತನ್ನ ಮಗಳನ್ನು ಪುಸಲಾಯಿಸಿ ಆಕೆಯ ಇಚ್ಛೆಗೆ ವಿರುದ್ಧವಾಗಿ ಅತ್ಯಾಚಾರವೆಸಗಿದ್ದ. ಆರೋಪಿಯ ಕೃತ್ಯಕ್ಕೆ ಬಾಲಕಿ ಹೆದರಿ ಸುಮ್ಮನಾಗಿದ್ದನ್ನು ಗಮನಿಸಿದ ಆರೋಪಿ ಬಳಿಕ ಆಕೆಯ ಮೇಲೆ ನಿರಂತರ ಅತ್ಯಾಚಾರ ಎಸಗಿದ್ದ. ಅಲ್ಲದೆ ಕೆಲವು ದಿನಗಳ ಬಳಿಕ ಆಕೆ ಹೆಣ್ಣುಮಗುವಿಗೆ ಜನ್ಮ ನೀಡಿದ್ದಳು. ಆರೋಪಿಯ ವಿರುದ್ಧ ಬಾಲಕಿಯ ತಾಯಿ ನಗರದ ಮಹಿಳಾ ಠಾಣೆಗೆ ದೂರು ನೀಡಿದ್ದರು. ಅದರಂತೆ ಇನ್ಸ್​ಪೆಕ್ಟರ್ ಕಲಾವತಿ ಆರೋಪಿಯನ್ನು ಬಂಧಿಸಿ ಸಮಗ್ರ ತನಿಖೆ ನಡೆಸಿ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದ್ದರು. ಮಗುವನ್ನು ಡಿಎನ್‌ಎ ಪರೀಕ್ಷೆಗೊಳಪಡಿಸಿದಾಗ ಕಿಶೋರ್ ಮೇಲಿದ್ದ ಆರೋಪ ಸಾಬೀತಾಗಿತ್ತು.

Intro:ಮಂಗಳೂರು : ಅಪ್ರಾಪ್ತ ವಯಸ್ಸಿನ ಮಗಳನ್ನು ಅತ್ಯಾಚಾರಗೈದ ಪ್ರಕರಣಕ್ಕೆ ಸಂಬಂಧಿಸಿದಂತೆ ಅಪರಾಧಿ ತಂದೆಗೆ ಜೀವಾವಧಿ ಶಿಕ್ಷೆ ವಿಧಿಸಿ ಮಂಗಳೂರಿನ 2ನೇ ಹೆಚ್ಚುವರಿ ಸೆಷನ್ಸ್ ನ್ಯಾಯಾಲಯ ಹಾಗೂ ಪೊಕ್ಸೊ ವಿಶೇಷ ನ್ಯಾಯಾಲಯ ಆದೇಶಿಸಿದೆ.Body:

ಉತ್ತರ ಭಾರತ ಮೂಲದ ಪ್ರಸ್ತುತ ಬೋಳಾರ ಲೇಬರ್ ಕಾಲನಿಯ ನಿವಾಸಿಯಾಗಿರುವ ಕಿಶೋರ್ (36) ಶಿಕ್ಷೆಗೊಳಗಾದ ಅಪರಾಧಿ.

ಐಪಿಸಿ 376 (ಅತ್ಯಾಚಾರ) ಮತ್ತು ಪೊಕ್ಸೊ ಸೆ. 6 (ಲೈಂಗಿಕ ದೌರ್ಜನ್ಯ) ಅನ್ವಯ ಜೀವಾವಧಿ ಶಿಕ್ಷೆ ಮತ್ತು 5,000 ರೂ. ದಂಡ ವಿಧಿಸಲಾಗಿದೆ. ದಂಡದ ಮೊತ್ತದಲ್ಲಿ 3,000 ರೂ. ಗಳನ್ನು ಸಂತ್ರಸ್ತ ಬಾಲಕಿಗೆ ನೀಡಬೇಕು ಹಾಗೂ 2,000 ರೂ. ಸರಕಾರಕ್ಕೆ ಪಾವತಿಸಬೇಕು. ಸಂತ್ರಸ್ತ ಬಾಲಕಿಯು ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಮೂಲಕವೂ ಸರಕಾರದಿಂದ ಪರಿಹಾರ ಪಡೆಯ ಬಹುದು ಎಂದು ನ್ಯಾಯಾಧೀಶರು ತೀರ್ಪಿನಲ್ಲಿ ತಿಳಿಸಿದ್ದಾರೆ.

 2016ರಲ್ಲಿ ಆರೋಪಿ ಕಿಶೋರ್ ತನ್ನ ಹೆಂಡತಿ ಹೆರಿಗೆಗೆಂದು ಅಸ್ಪತ್ರೆಯಲ್ಲಿ ದಾಖಲಾದ ಸಂದರ್ಭ 13 ವರ್ಷ ತನ್ನ ಮಗಳನ್ನು ಪುಸಲಾಯಿಸಿ ಆಕೆಯ ಇಚ್ಛೆಗೆ ವಿರುದ್ಧವಾಗಿ ಅತ್ಯಾಚಾರವೆಸಗಿದ್ದ. ಆರೋಪಿಯ ಕೃತ್ಯಕ್ಕೆ ಬಾಲಕಿ ಹೆದರಿ ಸುಮ್ಮನಾಗಿದ್ದನ್ನು ಗಮನಿಸಿದ ಆರೋಪಿ ಬಳಿಕ ಆಕೆಯ ಮೇಲೆ ನಿರಂತರ ಅತ್ಯಾಚಾರ ಎಸಗಿದ್ದ. ಇದರ ಪರಿಣಾಮ ಬಾಲಕಿ ಅಸೌಖ್ಯಕ್ಕೀಡಾಗಿ ಹೊಟ್ಟೆ ನೋವಿನಿಂದ ಬಳಲುತ್ತಿದ್ದಳು. ಆಸ್ಪತ್ರೆಯಲ್ಲಿ ತಪಾಸಣೆಗೊಳಪಡಿಸಿ ದಾಗ ಬಾಲಕಿ ಗರ್ಭಿಣಿ ಎಂದು ತಿಳಿದು ಬಂದಿತ್ತು. ಅಲ್ಲದೆ ಕೆಲವು ದಿನಗಳ ಬಳಿಕ ಆಕೆ ಹೆಣ್ಣು ಮಗುವಿಗೆ ಜನ್ಮ ನೀಡಿದ್ದಳು. ಆರೋಪಿಯ ವಿರುದ್ಧ ಬಾಲಕಿಯ ತಾಯಿ ನಗರದ ಮಹಿಳಾ ಠಾಣೆಗೆ ದೂರು ನೀಡಿದ್ದರು.

ಅದರಂತೆ ಇನ್‌ಸ್ಪೆಕ್ಟರ್ ಕಲಾವತಿ ಆರೋಪಿಯನ್ನು ಬಂಧಿಸಿ ಸಮಗ್ರ ತನಿಖೆ ನಡೆಸಿ ನ್ಯಾಯಾಲಯಕ್ಕೆ ದೋಷಾರೋಪಣ ಪಟ್ಟಿ ಸಲ್ಲಿಸಿದ್ದರು. ಮಗುವನ್ನು ಡಿಎನ್‌ಎ ಪರೀಕ್ಷೆಗೊಳಪಡಿಸಿದಾಗ ಕಿಶೋರ್ ಮೇಲಿದ್ದ ಆರೋಪ ಸಾಬೀತಾಗಿತ್ತು. ಸರಕಾರದ ಪರವಾಗಿ ವಿಶೇಷ ಅಭಿಯೋಜಕ ಸಿ. ವೆಂಕಟರಮಣ ಸ್ವಾಮಿ ವಾದಿಸಿದ್ದರು

Conclusion:

For All Latest Updates

TAGGED:

ETV Bharat Logo

Copyright © 2024 Ushodaya Enterprises Pvt. Ltd., All Rights Reserved.