ಹಾವೇರಿ: ಹತ್ತು ವರ್ಷದ ಬಾಲಕಿ ಮೇಲೆ ಅತ್ಯಾಚಾರ ಎಸಗಿದ್ದ ಆರೋಪಿಗೆ ನ್ಯಾಯಾಲಯ ಜೀವಾವಧಿ ಶಿಕ್ಷೆ ಹಾಗೂ 20 ಸಾವಿರ ರೂಪಾಯಿ ದಂಡ ವಿಧಿಸಿದೆ.
ಹಾವೇರಿ ಜಿಲ್ಲಾ 1ನೇ ಹೆಚ್ಚುವರಿ ನ್ಯಾಯಾಲಯ ಅಪರಾಧಿ ಇಮಾಮಸಾಬ ನದಾಫ ಎಂಬಾತನಿಗೆ ಶಿಕ್ಷೆ ವಿಧಿಸಿ ತೀರ್ಪು ಪ್ರಕಟಿಸಿದೆ.
ಏಪ್ರಿಲ್ 30, 2017ರಲ್ಲಿ ತಡಸ ಪೊಲೀಸ್ ಠಾಣೆಯಲ್ಲಿ ಈ ಕುರಿತಂತೆ ಪ್ರಕರಣ ದಾಖಲಾಗಿತ್ತು. ಫೊಕ್ಸೋ ಕಾಯ್ದೆಯಡಿ ದಾಖಲಾಗಿದ್ದ ಪ್ರಕರಣದಲ್ಲಿ ಸರ್ಕಾರದ ಪರವಾಗಿ ಸರ್ಕಾರಿ ಅಭಿಯೋಜಕ ಸಿದ್ದಾರೋಡ ವಾದ ಮಂಡಿಸಿದ್ದರು.