ETV Bharat / jagte-raho

ಕೆಂಪು ಕೋಟೆ ಹಿಂಸಾಚಾರ ಪ್ರಕರಣ: ನಟ ದೀಪ್​ ಸಿಧು ಅರೆಸ್ಟ್​ - ದೆಹಲಿ ವಿಶೇಷ ಪೊಲೀಸ್​ ಘಟಕ

Actor Deep Sidhu arrested by Delhi Police
ನಟ ದೀಪ್​ ಸಿಧು ಬಂಧನ​
author img

By

Published : Feb 9, 2021, 9:20 AM IST

Updated : Feb 9, 2021, 9:55 AM IST

09:15 February 09

14 ದಿನಗಳಿಂದ ತಲೆಮರೆಸಿಕೊಂಡಿದ್ದ ನಟ ದೀಪ್​ ಸಿಧು ಅವರನ್ನು ಬಂಧಿಸುವಲ್ಲಿ ದೆಹಲಿ ಪೊಲೀಸರು ಯಶಸ್ವಿಯಾಗಿದ್ದಾರೆ.

ನವದೆಹಲಿ: ಜನವರಿ 26 ರಂದು ನಡೆದ ಕೆಂಪು ಕೋಟೆ ಹಿಂಸಾಚಾರ ಪ್ರಕರಣ ಸಂಬಂಧ ತಲೆಮರೆಸಿಕೊಂಡಿದ್ದ ಪಂಜಾಬಿ​​ ನಟ ದೀಪ್​ ಸಿಧು ಅವರನ್ನು ದೆಹಲಿ ವಿಶೇಷ ಪೊಲೀಸ್​ ಘಟಕ ಬಂಧಿಸಿದೆ.

ಗಣರಾಜ್ಯೋತ್ಸವ ದಿನದಂದು ರೈತರು ಟ್ರ್ಯಾಕ್ಟರ್​ ರ‍್ಯಾಲಿ ನಡೆಸುತ್ತಿದ್ದ ವೇಳೆ ಫೇಸ್‌ಬುಕ್‌ನಲ್ಲಿ ಲೈವ್​​ ಬಂದು ಕೆಂಪು ಕೋಟೆ ಮೇಲೆ ಧ್ವಜ ಹಾರಿಸಲು ಪ್ರೇರೇಪಿಸಿದ್ದ ಆರೋಪ ದೀಪ್​ ಸಿಧು ಮೇಲಿತ್ತು. ಕಳೆದ 14 ದಿನಗಳಿಂದ ನಟ ತಲೆಮರೆಸಿಕೊಂಡಿದ್ದು, ಇವರ ಬಗ್ಗೆ ಮಾಹಿತಿ ನೀಡಿದವರಿಗೆ 1 ಲಕ್ಷ ರೂ.ಗಳ ನಗದು ಬಹುಮಾನ ನೀಡುವುದಾಗಿ ದೆಹಲಿ ಪೊಲೀಸರು ಘೋಷಿಸಿದ್ದರು.

ಇದನ್ನೂ ಓದಿ: ವಿವಾಹೇತರ ಸಂಬಂಧ ಆರೋಪ: ವ್ಯಕ್ತಿಯನ್ನು ಥಳಿಸಿ ಕೊಂದ ಗ್ರಾಮಸ್ಥರು

ಜ.26ರಂದು ನಡೆದಿದ್ದ ಟ್ರ್ಯಾಕ್ಟರ್ ರ‍್ಯಾಲಿ ಹಿಂಸಾತ್ಮಕ ರೂಪ ಪಡೆದಿತ್ತು. ಕೆಂಪುಕೋಟೆಗೆ ಮುತ್ತಿಗೆ ಹಾಕಿದ್ದ ಪ್ರತಿಭಟನಾನಿರತ ರೈತರು, ಕೋಟೆ ಮೇಲೆ ಧ್ವಜ ಹಾರಿಸಿದ್ದರು. ಪರಿಸ್ಥಿತಿ ನಿಯಂತ್ರಿಸುತ್ತಿದ್ದ ಪೊಲೀಸರ ಮೇಲೆಯೇ ಹಲ್ಲೆ ನಡೆಸಿದ್ದರು. ಈ ಹಿಂಸಾಚಾರದಲ್ಲಿ ಸುಮಾರು 394 ಪೊಲೀಸ್​ ಸಿಬ್ಬಂದಿ ಗಾಯಗೊಂಡಿದ್ದರು. ಪ್ರಕರಣ ಸಂಬಂಧ ಈವರೆಗೆ ಅನೇಕರ ಮೇಲೆ ಎಫ್​ಐಆರ್ ದಾಖಲಿಸಿ, ಬಂಧಿಸಲಾಗಿದೆ.  

Last Updated : Feb 9, 2021, 9:55 AM IST
ETV Bharat Logo

Copyright © 2025 Ushodaya Enterprises Pvt. Ltd., All Rights Reserved.