ETV Bharat / jagte-raho

ವಲಸೆ ಕಾರ್ಮಿಕರಿದ್ದ ಟ್ರಕ್​​ ಅಪಘಾತ: ಮೂವರು ಮಹಿಳೆಯರು ಸಾವು, 12 ಮಂದಿಗೆ ಗಾಯ - road accident

ಉತ್ತರ ಪ್ರದೇಶದಲ್ಲಿ ನಡೆದ ರಸ್ತೆ ಅಪಘಾತದಲ್ಲಿ ಮೂವರು ವಲಸೆ ಕಾರ್ಮಿಕರು ಮೃತಪಟ್ಟಿದ್ದಾರೆ.

road accident
ಅಪಘಾತ
author img

By

Published : May 19, 2020, 7:47 AM IST

Updated : May 19, 2020, 8:32 AM IST

ಉತ್ತರ ಪ್ರದೇಶ: ವಲಸೆ ಕಾರ್ಮಿಕರನ್ನು ಹೊತ್ತೊಯ್ಯುತ್ತಿದ್ದ ಡಿಸಿಎಂ ವಾಹನ ಪಲ್ಟಿ ಹೊಡೆದ ಪರಿಣಾಮ ಮೂವರು ಮಹಿಳೆಯರು ಮೃತಪಟ್ಟಿದ್ದು, 12 ಮಂದಿಗೆ ಗಾಯಗಳಾಗಿರುವ ಘಟನೆ ಉತ್ತರ ಪ್ರದೇಶದ ಮಹೋಬಾ ಜಿಲ್ಲೆಯ ಝಾನ್ಸಿ-ಮಿರ್ಜಾಪುರ ಹೆದ್ದಾರಿಯಲ್ಲಿ ಕಳೆದ ರಾತ್ರಿ ನಡೆದಿದೆ.

ವಾಹನದಲ್ಲಿ ಒಟ್ಟು 17 ಮಂದಿ ವಲಸೆ ಕಾರ್ಮಿಕರು ಪ್ರಯಾಣಿಸುತ್ತಿದ್ದು, ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಇವರಲ್ಲಿ ನಾಲ್ಕು ಜನರ ಸ್ಥಿತಿ ಗಂಭೀರವಾಗಿದೆ. ಕಾಲ್ನಡಿಗೆಯಲ್ಲೇ ದೆಹಲಿಯಿಂದ ಮಹೋಬಾಗೆ ಬರುತ್ತಿದ್ದ ಕಾರ್ಮಿಕರನ್ನು ನೋಡಿದ ಪೊಲೀಸರು ಟ್ರಕ್​ನಲ್ಲಿ ಕಳುಹಿಸಿಕೊಟ್ಟಿದ್ದಾರೆ. ಆದರೆ ಟೈರ್ ಪಂಕ್ಚರ್‌ ಆಗಿ ಗಾಡಿ ಪಲ್ಟಿ ಹೊಡೆದು ಅವಘಡ ಸಂಭವಿಸಿದೆ.

ಅಪಘಾತಕ್ಕೀಡಾದ ವಾಹನದಲ್ಲಿ ಪುಟ್ಟ ಮಗು ಕೂಡ ಇದ್ದು, ಅಪಾಯದಿಂದ ಪಾರಾಗಿದೆ. ಆದರೆ ಕಂದಮ್ಮನ ತಾಯಿ ಮೃತಪಟ್ಟಿದ್ದು, ತಂದೆ ಸಾವು-ಬದುಕಿನ ನಡುವೆ ಹೋರಾಟ ನಡೆಸುತ್ತಿದ್ದಾರೆ.

Last Updated : May 19, 2020, 8:32 AM IST
ETV Bharat Logo

Copyright © 2025 Ushodaya Enterprises Pvt. Ltd., All Rights Reserved.