ಶಿರಸಿ: ಗ್ಯಾರೇಜ್ನಲ್ಲಿ ಕೆಲಸ ಮಾಡಿಕೊಂಡಿದ್ದ ವ್ಯಕ್ತಿಯೊಬ್ಬನಿಗೆ ಸೋಡಾ ಬಾಟಲಿ ಮತ್ತು ಕಬ್ಬಿಣದ ರಾಡ್ನಿಂದ ಹೊಡೆದು, ಕೊಲೆ ಬೆದರಿಕೆ ಹಾಕಿ ತಪ್ಪಿಸಿಕೊಂಡಿದ್ದ ಆರೋಪಿಯನ್ನು 12 ವರ್ಷಗಳ ನಂತರ ಬಂಧಿಸುವಲ್ಲಿ ಶಿರಸಿ ಪೊಲೀಸರು ಯಶಸ್ವಿಯಾಗಿದ್ದಾರೆ.
ಓದಿ: ವರ್ಷಕ್ಕೊಮ್ಮೆ ದರ್ಶನ ಕೊಡುವ ಕಾಫಿನಾಡಿನ ಕಾಡು ಮಲ್ಲಿಗೆ
ರಾಕೇಶ ಸತ್ಯನಾರಾಯಣ ಕೋಣಾರ ಎಂಬಾತ ಬಂಧಿತ ಆರೋಪಿಯಾಗಿದ್ದಾನೆ. ಈತ ಶಿರಸಿಯ ಇಂದಿರಾ ನಗರದ ಮೋಹನ ಗ್ಯಾರೇಜಿನಲ್ಲಿ ವಾಹನ ರಿಪೇರಿಗೆ ಸಂಬಂಧಿಸಿದಂತೆ ಮನೋಜ್ ಎಂಬಾತನಿಗೆ ಟಿಎಸ್ಎಸ್ ರಸ್ತೆಯಲ್ಲಿ ತಡೆದು ನಿಲ್ಲಿಸಿ ಹಲ್ಲೆ ನಡೆಸಿದ್ದ. ಈ ಬಗ್ಗೆ ಶಿರಸಿ ಹೊಸ ಮಾರುಕಟ್ಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಆರೋಪಿಯ ಮೇಲೆ ನ್ಯಾಯಾಲಯದಿಂದ ಹಲವು ಬಾರಿ ದಸ್ತಗಿರಿ ವಾರಂಟ್ ಹೊರಡಿಸಿದ್ದರೂ ಸಹ ನ್ಯಾಯಾಲಯಕ್ಕೆ ಹಾಜರಾಗದೆ, ಪೊಲೀಸರ ಕೈಗೆ ಸಿಗದೆ ಕಣ್ತಪ್ಪಿಸಿಕೊಂಡು ಸುಮಾರು 12 ವರ್ಷಗಳಿಂದ ತಲೆಮರೆಸಿಕೊಂಡಿದ್ದ. ಈಗ ಶಿರಸಿ ಮಾರ್ಕೆಟ್ ಠಾಣೆಯ ಪೊಲೀಸರು ಕೊನೆಗೂ ಹಿಡಿದು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.